ಕರಾವಳಿ

ಮಂಗಳೂರು-ಕಾಸರಗೋಡು ಮಧ್ಯೆ ಉದ್ಯೋಗಿಗಳ ನಿತ್ಯ ಸಂಚಾರಕ್ಕೆ ಗ್ರೀನ್ ಸಿಗ್ನಲ್

Pinterest LinkedIn Tumblr

ಮಂಗಳೂರು: ಮಂಗಳೂರು-ಕಾಸರಗೋಡು ಮಧ್ಯೆ ಉದ್ಯೋಗಿಗಳ ನಿತ್ಯ ಸಂಚಾರಕ್ಕೆ ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಮಂಗಳೂರಿನಲ್ಲಿ ಉದ್ಯೋಗ ಮಾಡುವ ಹಿನ್ನೆಲೆ ಉಭಯ ಜಿಲ್ಲೆಗಳ ಮಧ್ಯೆ ಒಪ್ಪಂದ ಏರ್ಪಟ್ಟಿದ್ದು, ಕಾಸರಗೋಡಿನಲ್ಲಿರುವ ಗಡಿನಾಡ ಕನ್ನಡಿಗರಿಗೆ ಉದ್ಯೋಗ ನಿಮಿತ್ತ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರಿಗಷ್ಟೇ ಅವಕಾಶ ನೀಡಲಾಗಿದ್ದು, ಪಾಸ್ ಬಳಸಿ ನಿತ್ಯ ಸಂಚರಿಸಲು ಅವಕಾಶ ನೀಡಲಾಗಿದೆ. ಉದ್ಯೋಗ ಹೊರತು ಅನ್ಯ ಕಾರ್ಯಕ್ಕೆ ಪಾಸ್ ಬಳಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಉಭಯ ಜಿಲ್ಲೆಗಳ ಮಧ್ಯೆ ಸಂಚಾರಿಸುವವರು ಕಡ್ಡಾಯವಾಗಿ ನಿತ್ಯ ಥರ್ಮಲ್ ಸ್ಕ್ಯಾನ್ ಮತ್ತು ಆರೋಗ್ಯ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ.

ಪಾಸ್ ಗೆ ಅರ್ಜಿ ಸಲ್ಲಿಸಲು ಆಧಾರ್, ಉದ್ಯೋಗ ವಿಳಾಸ, ಮಾಹಿತಿ ಸಲ್ಲಿಸುವುದು ಕಡ್ಡಾಯವಾಗಿದ್ದು, Dkdpermit ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಸೂಚನೆ ನೀಡಿದ್ದಾರೆ.

Comments are closed.