ಕರಾವಳಿ

ದ.ಕ.ಜಿಲ್ಲೆಯಲ್ಲಿಇಂದು17 ಮಂದಿಯಲ್ಲಿ ಸೋಂಕು ಪತ್ತೆ : ರಾಜ್ಯದಲ್ಲಿ ಬರೋಬ್ಬರಿ 239 ಮಂದಿಗೆ ಪಾಸಿಟಿವ್

Pinterest LinkedIn Tumblr

ಮಂಗಳೂರು, ಜೂನ್. 07 : ರಾಜ್ಯದಲ್ಲಿ ಇಂದು ಮತ್ತೊಮ್ಮೆ ಕೊರೊನಾ ಮಹಾಸ್ಪೋಟ ಸಂಭವಿಸಿದ್ದು, ದ.ಕ.ಜಿಲ್ಲೆಯಲ್ಲಿ 17 ಮಂದಿ ಸೇರಿದಂತೆ ಕರ್ನಾಟಕದಲ್ಲಿ ಇಂದು ಒಂದೇ ದಿನ ಬರೋಬ್ಬರಿ 239 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 239 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 17 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ 17 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಮರಳಿದವರಾಗಿದ್ದರೆ. ಈ ನಡುವೆ ಜಿಲ್ಲೆಯಲ್ಲಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 101 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಕಲಬುರಗಿ 39, ಯಾದಗಿರಿ 39, ಬೆಳಗಾವಿ 38, ಬೆಂಗಳೂರು ನಗರ 23, ದಾವಣಗೆರೆ 17, ದಕ್ಷಿಣ ಕನ್ನಡ 17, ಉಡುಪಿ 13, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ ಮತ್ತು ಉತ್ತರ ಕನ್ನಡ ತಲಾ 2, ಮಂಡ್ಯ ಮತ್ತು ರಾಯಚೂರಿನಲ್ಲಿ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.

.

Comments are closed.