ಕರಾವಳಿ

ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Pinterest LinkedIn Tumblr

ಮಂಗಳೂರು ಜೂನ್ 11 : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು ಮಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ.

ಕಳೆದ 2 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ನೆರೆಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿರುತ್ತದೆ. ರಸ್ತೆಗಳನ್ನು ಮಳೆಹಾನಿ ದುರಸ್ಥಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸಕ್ತ ವರ್ಷದ ಮಳೆಗಾಲ ಸಹ ಪ್ರಾರಂಭವಾಗಿರುತ್ತದೆ. ಇದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಡ್ಡುವ ನಿಟ್ಟಿನಲ್ಲಿ ಹಾಗೂ ಭಾರಿ ವಾಹನ ಸಂಚಾರದಿಂದ ರಸ್ತೆಗೆ ಅಪಾಯವಾಗುವ ಸಾಧ್ಯತೆ ಇರುತ್ತದೆ.

ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾsಸ್ತಿಗಳ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಠಿಯಿಂದ ಕೊಡಗು ಜಿಲ್ಲೆಯಾದ್ಯಂತ ಜೂನ್ 11 ರಿಂದ ಆಗಸ್ಟ್ 10 ರವರೆಗೆ ಭಾರೀ ಸರಕು ಸಾಗಣಿಕೆ ವಾಹನಗಳ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು ಸೂಚಿಸಲಾಗಿದೆ.

ಸಂಚಾರ ನಿರ್ಬಂಧಿತ ವಾಹನಗಳು: ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣೆ ತೂಕ 16200 ಕೆ.ಜಿ ಗಿಂತ ಹೆಚ್ಚಿನ ಸರಕು ಸಾಗಾಣಿಕೆ ವಾಹನ, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್,್ಸ ಶಿಪ್, ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್, ಮಲ್ಟಿ ಎಕ್ಸಲ್ ವಾಹನಗಳನ್ನು ನಿಷೇಧಿಸಲಾಗಿದೆ.

Comments are closed.