ಮಂಗಳೂರು, ಜೂನ್. 12 : ರಾಜ್ಯದಲ್ಲಿ ಇಂದು ಮತ್ತೊಮ್ಮೆ ಕೊರೊನಾ ಮಹಾಸ್ಪೋಟ ಸಂಭವಿಸಿದ್ದು, ದ.ಕ.ಜಿಲ್ಲೆಯಲ್ಲಿ 17 ಮಂದಿ ಸೇರಿದಂತೆ ಕರ್ನಾಟಕದಲ್ಲಿ ಇಂದು ಒಂದೇ ದಿನ ಬರೋಬ್ಬರಿ 271 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 271 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 17 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 5 ಗಂಟೆವರೆಗೆ ರಾಜ್ಯದಲ್ಲಿ ಏಳು ಸಾವು, 271 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 6,516ಕ್ಕೆ ಏರಿಕೆಯಾಗಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬಳ್ಳಾರಿ 97, ಬೆಂಗಳೂರು ನಗರ 36, ಉಡುಪಿ 22, ಕಲಬುರಗಿ 20, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ್ 10, ಹಾಸನ ಮತ್ತು ಮೈಸೂರಿನಲ್ಲಿ 9, ತುಮಕೂರು 7, ಶಿವಮೊಗ್ಗ 6, ರಾಯಚೂರು ಮತ್ತು ಉತ್ತರ ಕನ್ನಡ ತಲಾ 4, ರಾಮನಗರ ಮತ್ತು ಚಿತ್ರದುರ್ಗ ತಲಾ 3, ಮಂಡ್ಯ 2, ವಿಜಯಪುರ, ಕೋಲಾರ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 6,516 ಕೊರೋನ ಸೋಂಕಿತರ ಪೈಕಿ 3,440 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 464 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 79 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 2,995 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಪ್ರಮುಖ ಅಂಶಗಳು :
ಕರಾವಳಿಯಲ್ಲಿ ಇಂದು ಕೊರೊನ ಸೋಂಕು ಹೆಚ್ಚಳ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 17 ಪಾಸಿಟಿವ್ ಕೇಸ್
14 ಮಂದಿ ಸೌದಿ ಅರೇಬಿಯಾದಿಂದ ಬಂದವರಿಗೆ ಕೊರೋನಾ ಸೋಂಕು
2 ಮಹಾರಾಷ್ಟ್ರದಿಂದ ಬಂದವರಿಗೆ ಕೊರೊನ ಸೋಂಕು ದೃಢ
ಒಂದು ಸಾರಿ ಕೇಸ್ ಪತ್ತೆ ( SARI – ತೀವ್ರ ಉಸಿರಾಟದ ತೊಂದರೆ)
16 ಜನ ಪುರುಷರು ಮತ್ತು 1 ಮಹಿಳೆಗೆ ಸೋಂಕು
Comments are closed.