ಕರಾವಳಿ

ದ.ಕ.ಜಿಲ್ಲೆಯ ಕರಾವಳಿ ಭಾಗದಲ್ಲಿ13 ರಿಂದ 15ರವರೆಗೆ ಆರೆಂಜ್ ಅಲರ್ಟ್, ಮತ್ತೆ 17ರವರೆಗೆ ಎಲ್ಲೋ ಅಲರ್ಟ್ ಘೋಷಣೆ

Pinterest LinkedIn Tumblr

ಮಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಜೂನ್ 17ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಕರಾವಳಿ ಭಾಗದಲ್ಲಿ ಜೂನ್ 13 ರಿಂದ 15 ವರೆಗೆ ಆರೆಂಜ್ ಅಲರ್ಟ್ ಹಾಗೂ  17ರವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾರತೀಯ ಹವಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕೇರಳ, ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಚುರುಕಾಗಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುತ್ತದೆ. ಜೂನ್ 13 ಹಾಗೂ 14ರಂದು 125 ಮಿ.ಮೀ ಮಳೆಯಾಗುವ ಸಂಭವವಿದೆ. 15ರಂದು 65 ಮಿ.ಮೀ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅದ್ದರಿಂದ ಸಾರ್ವಜನಿಕರು ಎಚ್ಚರದಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿದ್ದು, ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವೂದೇ ಸಮಸ್ಯೆಗಳಿಗೆ ತುರ್ತು ಸೇವೆ ಟೋಲ್ ಫ್ರೀ ಸಂಖ್ಯೆ 24 x 7 ಕಂಟ್ರೋಲ್ ರೂಮ್ 1077 ಕ್ಕೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.