ಕರಾವಳಿ

ಮಂಗಳೂರು : ಮುಂದಿನ ವರ್ಷ ಪಡೀಲ್‌ನಲ್ಲಿ ಆರಂಭವಾಗಲಿದೆ ನೂತನ ಜಿಲ್ಲಾಧಿಕಾರಿ ಕಚೇರಿ

Pinterest LinkedIn Tumblr

ಮಂಗಳೂರು ಜೂನ್ 13 : ಪಡೀಲ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡಕ್ಕೆ ಮೊದಲ ಹಂತದ ಯೋಜನೆಗೆ ರೂ. 41 ಕೋಟಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ಕಾಮಗಾರಿಗಳಿಗಾಗಿ ಹೆಚ್ಚುವರಿ ಅನುದಾನಕ್ಕಾಗಿ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಅನುದಾನ ಬಿಡುಗಡೆಗೆ ಸಿದ್ಧತೆ ನಡೆಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ನಗರದ ಹೊರವಯಲದ ಪಡೀಲ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣದ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿ ಕಾಮಗಾರಿಯನ್ನು ಅತ್ಯಂತ ವೇಗವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಸಿದರು. ಮುಂದಿನ ವರ್ಷದಲ್ಲಿ ಕಟ್ಟಡ ಪೂರ್ಣಗೊಳಿಸಲು ಎಲ್ಲಾ ಸಿದ್ಧತೆ ಮಾಡಲು ಅವರು ತಿಳಿಸಿದರು.

ಈ ಕಟ್ಟಡವು ಜಿಲ್ಲೆಯ ಎಲ್ಲಾ ಇಲಾಖೆಗಳಿಗೆ ಕೇಂದ್ರಸ್ಥಾನವಾಗಲಿದ್ದು, ಬಹುತೇಕ ಇಲಾಖೆಗಳು ಇಲ್ಲಿಗೆ ಸ್ಥಳಾಂತರಗೊಳ್ಳಲಿವೆ. ಹೆಚ್ಚುವರಿ ಅನುದಾನ ಬಿಡುಗಡೆಗಾಗಿ ಬೆಂಗಳೂರಿನಲ್ಲಿ ಕಂದಾಯ ಸಚಿವರನ್ನು ಭೇಟಿಯಾಗುವುದಾಗಿ ಸಚಿವರು ತಿಳಿಸಿದರು.

ಕಟ್ಟಡದ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಮತ್ತು ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Comments are closed.