ಕರಾವಳಿ

ದ.ಕ.ಜಿಲ್ಲೆಯಲ್ಲಿಇಂದು 30 ಮಂದಿಯಲ್ಲಿ ಪಾಸಿಟಿವ್ : ರಾಜ್ಯದಲ್ಲಿ ಬರೋಬ್ಬರಿ 308 ಮಂದಿಗೆ ಸೋಂಕು ದೃಢ

Pinterest LinkedIn Tumblr

ಮಂಗಳೂರು, ಜೂನ್. 13 : ರಾಜ್ಯದಲ್ಲಿ ಸರಣಿ ಕೊರೊನಾ ಮಹಾಸ್ಪೋಟ ಸಂಭವಿಸುತ್ತಿದ್ದು, ದ.ಕ.ಜಿಲ್ಲೆಯಲ್ಲಿ 30 ಮಂದಿ ಸೇರಿದಂತೆ ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ 308 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಇಂದು ಒಂದೇ ದಿನ 80ಕ್ಕೂ ಹೆಚ್ಚು ಮಕ್ಕಳು ಸೇರಿ308 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 30 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಕಲಬುರಗಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದಕ್ಷಿಣ ಕನ್ನಡ 30, ಧಾರವಾಡ 20, ಉಡುಪಿ 14, ಹಾಸನ ಮತ್ತು ಬಳ್ಳಾರಿಯಲ್ಲಿ ತಲಾ 11, ವಿಜಯಪುರ 6, ರಾಯಚೂರು ಮತ್ತು ಉತ್ತರ ಕನ್ನಡದಲ್ಲಿ ತಲಾ 5, ಕೋಲಾರ 4, ದಾವಣಗೆರೆ 3, ಮಂಡ್ಯ ಮತ್ತು ಹಾವೇರಿಯಲ್ಲಿ ತಲಾ 2, ರಾಮನಗರ, ಮೈಸೂರು ಮತ್ತು ಬಾಗಲಕೋಟೆಯಲ್ಲಿ ತಲಾ ಒಂದು ಪ್ರಕರಣ ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 6,824 ಕೊರೋನ ಸೋಂಕಿತರ ಪೈಕಿ 3,648 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 209 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 81 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,092 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಮುಖ ಅಂಶಗಳು :

ರಾಜ್ಯದಲ್ಲಿ ಇಂದು 308 ಕೊರೋನಾ ಪಾಸಿಟಿವ್

ದಕ್ಷಿಣ ಕನ್ನಡದಲ್ಲಿ ಬರೋಬ್ಬರಿ 30 ಮಂದಿಗೆ ಕೊರೋನಾ ಪಾಸಿಟಿವ್*

ದಕ್ಷಿಣ ಕನ್ನಡ ಜಿಲ್ಲೆಗೆ ಸೌದಿ ಅರೇಬಿಯಾ ಕೊರೋನಾ ಶಾಕ್

ಸೌದಿಯಿಂದ ಬಂದ‌ 25 ಮಂದಿಗೆ ಕೊರೋನಾ ಸೋಂಕು

ಮಹಾರಾಷ್ಟ್ರದಿಂದ ಬಂದ 5 ಮಂದಿಗೆ ಸೋಂಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 30 ಮಂದಿಗೆ ಕೊರೋನಾ ಸೋಂಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು 263ಕ್ಕೇರಿಕೆ.

Comments are closed.