ಕರಾವಳಿ

ಬಂಟ್ವಾಳ : ಶಿವನ ವಿಗ್ರಹದ ಮೇಲೆ ಶೂ ಧರಿಸಿ ಟಿಕ್‍ಟಾಕ್ : ನಾಲ್ವರ ಬಂಧನ

Pinterest LinkedIn Tumblr

ಮಂಗಳೂರು, ಜೂನ್.14: ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವುನ ರುದ್ರಭೂಮಿಯ ಶಿವನ ವಿಗ್ರಹದ ಪೀಠದ ಮೇಲೆ ಶೂ ಧರಿಸಿ ಟಿಕ್‍ಟಾಕ್ ಮಾಡಿ ಬಳಿಕ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಸಜೀಪನಡು ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಮಸೂದ್ (20), ಮೊಹಮ್ಮದ್ ಅರ್ಫಾಜ್ (20), ಅಬ್ದುಲ್ ಲತೀಫ್ (20), ಮೊಹಮ್ಮದ್ ಅಜೀಮ್ (20) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳು ಜೂನ್‌‌ 13ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವುನ ಹಿಂದೂ ರುದ್ರಭೂಮಿಯ ಶಿವನ ವಿಗ್ರಹದ ಪೀಠದ ಮೇಲೆ ಶೂ ಧರಿಸಿ ಟಿಕ್‍ಟಾಕ್ ಮಾಡುವ ಮೂಲಕಧಾರ್ಮಿಕ ನಂಬಿಕೆಗೆ ಘಾಸಿಯಾಗುವಂತ ಕೃತ್ಯವೆಸಗಿದ್ದು, ಬಳಿಕ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಆರೋಪಿಗಳ ಕೃತ್ಯವನ್ನು ನೋಡಿದ ರುದ್ರಭೂಮಿ ಅಧ್ಯಕ್ಷರು ಹಿಂದು ಧಾರ್ಮಿಕ ಶೃದ್ಧಾ ಕೇಂದ್ರಕ್ಕೆ ಧಕ್ಕೆಯಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ವಿಡಿಯೋ ಆಧರಿಸಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಇದೀಗ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Comments are closed.