ಕರಾವಳಿ

ದ್ವಿತೀಯ ಪಿ.ಯು.ಸಿ. ಪರೀಕ್ಷೆಗೂ ತಟ್ಟಿದ ಕೊರೋನಾ ಭಯ : ಹಲವು ವಿದ್ಯಾರ್ಥಿಗಳು ಗೈರು

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು ಜೂನ್ 19 : ಕೊರೋನಾ ಭೀತಿಯ ನಡುವೆಯೇ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗುರುವಾರ ನಡೆದ ದ್ವಿತೀಯ ಪಿ.ಯು.ಸಿ. ಇಂಗ್ಲೀಷ್ ಪರೀಕ್ಷೆಗೆ ಕೊರೋನಾ ಭಯ ಹಿನ್ನೆಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ

ಇಂಗ್ಲೀಷ್ ಪರೀಕ್ಷೆಗೆ 26,952 ವಿದ್ಯಾರ್ಥಿಗಳು ರಿಜಿಸ್ಟ್ರೇಶನ್ (ನೊಂದಣಿ) ಆಗಿದ್ದು, ಒಟ್ಟು 26,486 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 466 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ದ.ಕ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಕೃತಜ್ಞತೆ:

ಕೋವಿಡ್ – 19 ರ ಮಾರ್ಗಸೂಚಿ ನಿಯಮದನ್ವಯ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ಚಿಯಾಗಿ ನಡೆಯಲು ಸಹಕರಿಸಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು, ಪೊಲೀಸ್, ಬಸ್ ಸಿಬ್ಬಂದಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಸಿಬ್ಬಂದಿಗಳು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

Comments are closed.