ಕರಾವಳಿ

ನ್ಯಾಯಾಧೀಶರುಗಳ ಮನೆ ಪರಿಸರದಲ್ಲಿ ನೆಡಲು ಔಷಧಿ ಗುಣಗಳುಳ್ಳ ಗಿಡ ಹಸ್ತಾಂತರ

Pinterest LinkedIn Tumblr

ಮಂಗಳೂರು ಜೂನ್ 19 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಅರಣ್ಯ ಇಲಾಖೆ ವಿಶೇಷ ಆರ್ಥಿಕ ವಲಯ ಮಂಗಳೂರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರುಗಳ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ದ.ಕ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಅವರ ವಸತಿ ಗೃಹದಲ್ಲಿ ಗಿಡಗಳನ್ನು ನೆಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ 2ನೇ ಹಂತದಲ್ಲಿ ವಿಶೇಷ ಆರ್ಥಿಕ ವಲಯದ ಆವರಣದಲ್ಲಿ ಹಾಗೂ 3ನೇ ಹಂತದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲಿ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು .

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ನ್ಯಾಯಾಧೀಶರು ಅವರ ವಾಸ್ತವ್ಯದ ಪರಿಸರದಲ್ಲಿ ವಿವಿಧ ರೀತಿಯ ಔಷಧಿ ಗುಣಗಳುಳ್ಳ ಗಿಡಗಳನ್ನು ನೆಡುವಂತೆ ಹಸ್ತಾಂತರಿಸಿ, ತದನಂತರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶಿಸಿದ ಪರಿಸರ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ವಿಧಾನಗಳ ಅಳವಡಿಕೆ ಬಗ್ಗೆ ಪ್ರತಿಜ್ಞೆ ಸ್ವೀಕಾರ ಮಾಡಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ ಇದರ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ. ವಂದಿಸಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವನ್ನು ಬಹಳ ಕಟ್ಟುನಿಟ್ಟಿನಿಂದ ಕಾಯ್ದು ಕೊಳ್ಳಲಾಗಿದ್ದು, ಪ್ರತಿಯೊಬ್ಬ ನ್ಯಾಯಾಧೀಶರು ತಾವು ನೆಟ್ಟು ಬೆಳೆಸುವ ಗಿಡಗಳ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಲಾಯಿತು.

Comments are closed.