ಕರಾವಳಿ

ನಗರ ವ್ಯಾಪ್ತಿಯ ವಿವಿಧ ವರ್ಗಗಳಿಗೆ 1500 ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿದ ಶಾಸಕ ಕಾಮತ್

Pinterest LinkedIn Tumblr

ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ ಆಟೋ ಚಾಲಕರ ಸಂಘ, ಛಾಯಾಚಿತ್ರ ಗ್ರಾಹಕರಿಗೆ, ನೇಕಾರರ ಸಂಘ, ವೆನ್ಲಾಕ್ ಆಸ್ಪತ್ರೆ ಸಿಬ್ಬಂದಿಗಳಿಗೆ, ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಸುಮಾರು 1500 ದಿನಸಿ ಸಾಮಾಗ್ರಿಗಳ ಕಿಟ್`ನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ಲೌಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಪ್ರತಿಯೊಂದು ಕುಟುಂಬದ ಕಾಳಜಿ ಸರಕಾರ ಹಾಗೂ ಜನಪ್ರತಿನಿಧಿಯಾಗಿ ನಮ್ಮ ಮೇಲಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಕೋವಿಡ್ 19 ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿಚರಿಸಲಾಗಿದೆ. ಆಟೋ ರಿಕ್ಷಾ ಚಾಲಕರು, ನೇಕಾರರು, ಛಾಯಾಚಿತ್ರ ಗ್ರಾಹಕರು, ದೈವ ಚಾಕಿರಿ ಮಾಡುತ್ತಿರುವವರು ಸೇರಿದಂತೆ ಅನೇಕ ವರ್ಗಗಳಿಗೆ ಈ ಮೂರು ತಿಂಗಳ ಅವಧಿಯಲ್ಲಿ ಯಾವುದೇ ಸಂಪಾದನೆ ಇಲ್ಲದಾಗಿದೆ. ಹಾಗಾಗಿ ಈ ವರ್ಗಗಳ ಪರಿಸ್ಥಿತಿ ಅವಲೋಕಿಸಿ ಒಟ್ಟು 1500 ಕಿಟ್ ಗಳನ್ನು ಇಂದು ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಗತ್ತನ್ನು ಭೀತಿಗೊಳಿಸಿರುವ ಕೊರೆನೋ ವೈರಸ್ ವಿಪರೀತವಾಗಿ ಹರಡುವ ಕಾರಣ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಗತ್ಯ. ಜನರ ಹಿತದೃಷ್ಟಿಯಿಂದ ಸರ್ಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಡಿಲಗೊಳಿಸಿದ ಹಿನ್ನೆಲೆಯಲ್ಲಿ ಈಗಷ್ಟೇ ಜನರು ತಮ್ಮ ಉದ್ಯೋಗಕ್ಕೆ ತೆರಳುತ್ತಿದ್ದಾರೆ. ಆದರೆ ಮುಂಜಾಗ್ರತಾ ಕ್ರಮಗಳನ್ನು ಕಡೆಗಣಿಸದೆ ಜನರು ಸರಕಾರದ ಜೊತೆ ಕೈ ಜೋಡಿಸಬೇಕು. ಎಲ್ಲರೂ ಒಂದಾಗಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಸಂಕಲ್ಪ ಮಾಡಬೇಕು ಎಂದು ಶಾಸಕ‌ ಕಾಮತ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅದ್ಯಕ್ಷೆ ಪೂರ್ಣಿಮಾ, ಮಂಗಳೂರು ನಗರ ದಕ್ಷಿಣ ಮಂಡಲ‌ ಬಿಜೆಪಿ ಅದ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಡಲ‌ ಪ್ರಧಾನ ಕಾರ್ಯದರ್ಶಿ ಜೆ.ಸುರೇಂದ್ರ, ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Comments are closed.