ಕರಾವಳಿ

ದ.ಕ.ಜಿಲ್ಲೆಯಲ್ಲಿಂದು 4 ಮಂದಿಗೆ ಸೋಂಕು ದೃಢ : ರಾಜ್ಯದಲ್ಲಿ416 ಮಂದಿಯಲ್ಲಿ ಕೊರೊನಾ ಪತ್ತೆ

Pinterest LinkedIn Tumblr

ಮಂಗಳೂರು, ಜೂನ್. 20 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 4 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ416 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ  ಒಂದೇ ದಿನ 416 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 4 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಇಂದು ಕಲಬುರ್ಗಿಯಲ್ಲಿ 34, ಶಿವಮೊಗ್ಗದಲ್ಲಿ 1, ಬೀದರ್‌‌ನಲ್ಲಿ 12, ಬೆಂಗಳೂರು ನಗರದಲ್ಲಿ 55, ದಕ್ಷಿಣ ಕನ್ನಡದಲ್ಲಿ 4, ಧಾರವಾಡದಲ್ಲಿ 4, ಹಾಸನದಲ್ಲಿ 16, ರಾಯಚೂರಿನಲ್ಲಿ15, ಬೆಳಗಾವಿ 1, ದಾವಣಗೆರೆಯಲ್ಲಿ 3, ಬಾಗಲಕೋಟೆಯಲ್ಲಿ 2, ಉಡುಪಿ 13, ಮಂಡ್ಯ 4, ಮೈಸೂರು 22, ಹಾವೇರಿ 12, ವಿಜಯಪುರ 9, ಚಿಕ್ಕಮಗಳೂರು 8, ಉತ್ತರಕನ್ನಡ 4 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,697ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 9 ಮಂದಿ ಕೊರೋನಾಕ್ಕೆ ಬಲಿ:

ರಾಜ್ಯದಲ್ಲಿ ಇಂದು 9 ಮಂದಿ ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ.181 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ 5,391ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 3,170 ಸಕ್ರಿಯ ಪ್ರಕರಣಗಳಿವೆ.ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದ.ಕ.ಜಿಲ್ಲೆಯಲ್ಲಿ ಇಂದು 13 ಮಂದಿ ಗುಣಮುಖ:

ಸೋಂಕಿತರಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಶನಿವಾರ ವೆನ್ಲಾಕ್ ಆಸ್ಪತ್ರೆಯಿಂದ 13 ಮಂದಿ ಕೊರೋನದಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ. ಅಲ್ಲದೆ, 81 ಹಾಗೂ 60 ವರ್ಷದ ವೃದ್ಧರನ್ನು ‘ಕೋವಿಡ್-19 ಟೆಕ್ನಿಕಲ್ ಅಡ್ವೈಸರಿ ಕಮಿಟಿ ಬೆಂಗಳೂರು’ ಇವರ ತೀರ್ಮಾನದಂತೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇದರೊಂದಿಗೆ 221 ಮಂದಿ ಇದುವರೆಗೆ ಸೋಂಕು ಮುಕ್ತರಾದಂತಾಗಿದೆ.

ಸೌದಿ ಅರೇಬಿಯ, ಕುವೈತ್, ಮುಂಬೈನಿಂದ ಬಂದಿದ್ದ ತಲಾ ಓರ್ವರಲ್ಲಿ ಸೋಂಕು ದೃಢಪಟ್ಟಿದೆ. ಜೊತೆಗೆ ಪಿ-8005ರ ಪ್ರಾಥಮಿಕ ಸಂಪರ್ಕದಲ್ಲಿದ್ದ 21 ವರ್ಷದ ಯುವಕನಲ್ಲೂ ಸೋಂಕು ಇರುವುದು ಪತ್ತೆಯಾಗಿದೆ. ಎಲ್ಲ ಸೋಂಕಿತರನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 426ಕ್ಕೆ ಏರಿಕೆಯಾಗಿದ್ದು, ಈ ಪೈಕಿ 10 ಮಂದಿ ಹೊರ ಜಿಲ್ಲೆಯವರು. ಶನಿವಾರ ಒಟ್ಟು 121 ವರದಿಗಳು ಪ್ರಯೋಗಾಲಯದಿಂದ ಬಂದಿದ್ದು, ಅವುಗಳಲ್ಲಿ ನಾಲ್ಕು ಪಾಸಿಟಿವ್ ಆಗಿದ್ದರೆ, ಉಳಿದೆಲ್ಲವೂ ನೆಗೆಟಿವ್ ಆಗಿವೆ. ಹೊಸದಾಗಿ 116 ಮಂದಿಯ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Comments are closed.