ಮಂಗಳೂರು, ಜೂನ್. 24 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಉಳ್ಳಾಲದ ಮಹಿಳೆಗೆ ಕೊರೋನ ಪಾಸಿಟಿವ್ ಆಗಿದ್ದು, ಅವರು ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಈ ಮೂಲಕ ದ.ಕ.ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಾವಿನ ಸಂಖ್ಯೆ 10ಕ್ಕೇ ಏರಿದೆ.
ಉಳ್ಳಾಲದ 57 ವರ್ಷದ ಮಹಿಳೆಯನ್ನು ಅನಾರೋಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, 8 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಕೊರೋನ ಪಾಸಿಟಿವ್ ಬಂದಿತ್ತು. ಅವರು ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
Comments are closed.