ಕರಾವಳಿ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕೊರೋನಾ ಭೀತಿ : ದ.ಕ.ಜಿಲ್ಲೆಯಲ್ಲಿ 1658 ವಿದ್ಯಾರ್ಥಿಗಳು ಗೈರು

Pinterest LinkedIn Tumblr

ಮಂಗಳೂರು ಜೂನ್ 25 : ಎಸ್.ಎಸ್.ಎಲ್.ಸಿ. ಪರೀಕ್ಷೆ ಗುರುವಾರ ಆರಂಭವಾಗಿದ್ದು, ಕೊರೋನಾ ಭೀತಿಯ ನಡುವೆಯೇ ಮೊದಲ ದಿನ ದ್ವಿತೀಯ ಭಾಷೆ ( ಇಂಗ್ಲೀಷ್ ) ಪರೀಕ್ಷೆ ಯಶಸ್ವಿಯಾಗಿ ನಡೆಯಿತು.

ಇಂದಿನ ಪರೀಕ್ಷೆಗೆ 29,032 ವಿದ್ಯಾರ್ಥಿಗಳು ನೊಂದಣಿ ಆಗಿದ್ದು, ಒಟ್ಟು 27,374 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1658 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಕೋವಿಡ್ 19, ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಮುನ್ನೆಚ್ಚರಿಕೆ :

ದ.ಕ.ಜಿಲ್ಲೆಯಲ್ಲ ಕೋವಿಡ್ ಹಿನ್ನೆಲೆಯಲ್ಲಿ ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಕೇವಲ 20 ವಿದ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಏರ್ಪಡಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಸ್ಯಾನಿಟೈಝೇಶನ್ ಮಾಡಲಾಗಿತ್ತು.

ಪ್ರತೀ ಪರೀಕ್ಷೆ ಮುಗಿದ ತಕ್ಷಣ ಮತ್ತೊಮ್ಮೆ ಸ್ಯಾನಿಟೈಝೇಶನ್ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಮಾಸ್ಕ್‍ಗಳನ್ನು ವಿತರಿಸಲಾಗಿತ್ತು.. ಪರೀಕ್ಷಾ ಕೇಂದ್ರ ಪ್ರವೇಶಿಸುವ ವಿದ್ಯಾರ್ಥಿಗಳ ಆರೋಗ್ಯ ಪರೀಕ್ಷಿಸಲು 632 ಥರ್ಮಲ್ ಸ್ಕ್ಯಾನರ್‍ಗಳನ್ನು ಅಳವಡಿಸಲಾಗಿತ್ತು.

Comments are closed.