ಕರಾವಳಿ

ದ.ಕ. ಜಿಲ್ಲೆಯಲ್ಲಿ ಇಂದು ಮತ್ತೆ 29 ಮಂದಿಯಲ್ಲಿ ಪಾಸಿಟಿವ್ : ರಾಜ್ಯದಲ್ಲಿ 442 ಮಂದಿಯಲ್ಲಿ ಕೊರೊನಾ ಪತ್ತೆ

Pinterest LinkedIn Tumblr

ಮಂಗಳೂರು, ಜೂನ್. 25 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ, ಜೊತೆಗೆ ಜಿಲ್ಲೆಯಲ್ಲಿ ಇಂದು ಮತ್ತೆ 29 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ 442 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಸೋಮವಾರ ಒಂದೇ ದಿನ 442ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ 29 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 465ಕ್ಕೆ ಏರಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 113, ಕಲಬುರಗಿ 35, ರಾಮನಗರ 33, ದಕ್ಷಿಣ ಕನ್ನಡ 29, ಧಾರವಾಡ 26, ಬಳ್ಳಾರಿ 26, ಮೈಸೂರು 22, ಬಾಗಲಕೋಟೆ 18, ಕೊಡಗು 18, ಉಡುಪಿ 14, ಹಾಸನ 12, ಬೆಂಗಳೂರು ಗ್ರಾಮಾಂತರ 12, ಉತ್ತರ ಕನ್ನಡ 11, ಗದಗ 10, ವಿಜಯಪುರ 10, ಹಾವೇರಿ 10, ಮಂಡ್ಯ 9, ಬೀದರ್ 8, ದಾವಣಗೆರೆ 7, ಶಿವಮೊಗ್ಗ 4, ಬೆಳಗಾವಿ 4, ಕೋಲಾರ 4, ಯಾದಗಿರಿ 2, ಚಿಕ್ಕಬಳ್ಳಾಪುರ 2, ಚಾಮರಾಜನಗರ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.

ರಾಜ್ಯದಲ್ಲಿ 5 ಮಂದಿ ಕೊರೋನಾಕ್ಕೆ ಬಲಿ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂರು, ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 170ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದೇ ದಿನ ಮೂವರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯ 80 ವರ್ಷದ ವೃದ್ಧೆ, 60 ವರ್ಷದ ಮಹಿಳೆ ಮತ್ತು 38 ವರ್ಷದ ವ್ಯಕ್ತಿಯೊಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರಿನ 87 ವರ್ಷದ ವೃದ್ಧ ಹಾಗೂ ಕಲಬುರಗಿ ಜಿಲ್ಲೆಯ 61 ವರ್ಷದ ವ್ಯಕ್ತಿಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 10,560 ಕೊರೋನ ಸೋಂಕಿತರ ಪೈಕಿ 6,670 ಮಂದಿ ಸಂಪೂರ್ಣ ಗುಣಮುಖರಾಗಿ ದ್ದಾರೆ. ಇದರಲ್ಲಿ ಇಂದು ಒಂದೇ ದಿನ 519 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 170 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,716 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments are closed.