ಕರಾವಳಿ

ದ.ಕ.ಜಿಲ್ಲೆಯಲ್ಲಿ ಐವರು ವೈದ್ಯರಿಗೆ ಸೋಂಕು ದೃಢ – ಜನತೆ ಹಾಗೂ ವೈದ್ಯವರ್ಗ ಭಯಪಡಬೇಕಾಗಿಲ್ಲ:ಆರೋಗ್ಯಾಧಿಕಾರಿ

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು : ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳ ಐದು ಮಂದಿ ಪಿಜಿ ವೈದ್ಯರಿಗೆ ಕೊರೋನ ಸೋಂಕು ತಗಲಿದೆ. ವೈದ್ಯರಿಗೆ ಸೋಂಕು ದೃಢ ಹಿನ್ನಲೆಯಲ್ಲಿ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ. ಹಾಗೆಯೇ ವೈದ್ಯವರ್ಗವೂ ಭಯಪಡಬೇಕಾಗಿಲ್ಲ ಎಂದು ಎಂದು ದ.ಕ‌. ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಐವರು ಪಿಜಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ತಗಲಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದು, ಸೋಂಕಿತ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಸಂಪರ್ಕಕ್ಕೆ ಬಂದವರ ಮಾಹಿತಿ ಕಲೆ ಹಾಕಲು ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ಕೆಲವು ಮಂದಿ ಅವರ ಸಂಪರ್ಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ಜಿಲ್ಲಾಡಳಿತವು ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆಯನ್ನೂ ವಹಿಸಲಾಗಿದೆ. ಜನರು ಈ ಬಗ್ಗೆ ಯಾವುದೇ ಆತಂಕ ಪಡಬಾರದು ಎಂದು ಅವರು ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಗುರುವಾರ 29 ಮಂದಿಗೆ ಸೋಂಕು ಧೃಢ : 43 ಮಂದಿ ಗುಣಮುಖ

ದ.ಕ. ಜಿಲ್ಲೆಯಲ್ಲಿ ಗುರುವಾರ ಮತ್ತೆ 29 ಮಂದಿಗೆ ಕೊರೋನ ಸೋಂಕು ತಗುಲಿದೆ. ಸೋಂಕು ದೃಢಪಟ್ಟವರ ಪೈಕಿ 19 ಮಂದಿ ಸೌದಿ ಅರೇಬಿಯ, ಶಾರ್ಜಾ, ಮಸ್ಕತ್ ಹಾಗೂ ಕತರ್‌ನಿಂದ ಆಗಮಿಸಿದವರು.

ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಆರು ಮಂದಿ ಸಹಿತ ‘ಐಎಲ್‌ಐ’ ಹಾಗೂ ‘ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್’ ಪ್ರಕರಣದಲ್ಲಿ ತಲಾ ಓರ್ವರಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೊಂದು ಹೊರರಾಜ್ಯದಿಂದ ಬಂದ ಪ್ರಕರಣವಾಗಿದೆ. ಈ ಪೈಕಿ 68 ವರ್ಷದ ಮಹಿಳೆಯು ‘ಎಸ್‌ಎಆರ್‌ಐ’ ಪ್ರಕರಣದಲ್ಲಿ ಬುಧವಾರ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 494ಕ್ಕೆ ಏರಿಕೆಯಾಗಿದೆ. ಈ ನಡುವೆ 43 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಗುರುವಾರ 12 ವರ್ಷದ ಬಾಲಕ 43 ಮಂದಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಇದರೊಂದಿಗೆ 344 ಮಂದಿ ಇದುವರೆಗೆ ಸೋಂಕು ಮುಕ್ತರಾದಂತಾಗಿದೆ. ಈಗ ಚಿಕಿತ್ಸೆಯಲ್ಲಿರುವ ಬಹುತೇಕ ಮಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ

Comments are closed.