ಕರಾವಳಿ

ಪುತ್ರನಲ್ಲಿ ಸೋಂಕು ಪತ್ತೆ : ಸುರತ್ಕಲ್‌ನ ಮಾಜಿ ಶಾಸಕರ ಮನೆ ಸೀಲ್ ಡೌನ್

Pinterest LinkedIn Tumblr

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಸಮೀಪ ವಾಸಿಸುತ್ತಿರುವ ಮಾಜಿ ಶಾಸಕರ ಪುತ್ರನಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಅವರ ಮನೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.

ಮಾಜಿ ಶಾಸಕರ ಪುತ್ರನು ಈ ಮೊದಲು ಬೆಂಗಳೂರಿನಲ್ಲಿದ್ದರು. ಅವರ ಗಂಟಲಿನ ದ್ರವದ ಪರೀಕ್ಷಾ ವರದಿಯಲ್ಲಿ ಸೋಂಕು ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ನಗರದ ವೆನ್ಲಾಕ್ ಕೊವೀಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಹೊರವಲಯದ ಸುರತ್ಕಲ್ ವ್ಯಾಪ್ತಿಯಲ್ಲಿರುವ ಚೊಕ್ಕಬೆಟ್ಟು ಬಳಿಯ ಮಾಜಿ ಶಾಸಕರ ಮನೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೆಯ ಇತರ ಸದಸ್ಯರ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದು, ಮನೆಯನ್ನು ಸಾರ್ವಜನಿಕರ ಭೇಟಿಗೆ ಬಂದ್ ಮಾಡಲಾಗಿದೆ. ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.