ಕರಾವಳಿ

ಮಂಗಳೂರಿನ ದಕ್ಷ ಪೊಲೀಸ್ ಅಧಿಕಾರಿ, ಕಮಿಷನರ್ ಡಾ.ಹರ್ಷ ದಿಢೀರ್ ವರ್ಗಾವಣೆ

Pinterest LinkedIn Tumblr

ಮಂಗಳೂರು, ಜೂನ್. 26: ಮಂಗಳೂರಿನ ದಕ್ಷ ಪೊಲೀಸ್ ಅಧಿಕಾರಿ, ಕಠಿಣ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿ ವ್ಯಾಪ ಪ್ರಶಂಸೆಗೆ ಪಾತ್ರರಾಗಿದ್ದ ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಹರ್ಷ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ನಕ್ಸಲ್ ನಿಗ್ರಹ ಪಡೆಯ ಆಯುಕ್ತರಾಗಿದ್ದ ವಿಕಾಸ್ ‌ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರನ್ನಾಗಿ ನೇಮಕಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿ ಬರುವಂತೆ ಆದೇಶ ಹೊರಡಿಸಲಾಗಿದೆ.

ಡಾ. ಹರ್ಷ ಅವರನ್ನು ಮಂಗಳೂರಿಗೆ ವರ್ಗಾವಣೆಗೊಳ್ಳುವ ಮೊದಲು ಅವರು ಕಾರ್ಯನಿರ್ವಾಹಿಸುತ್ತಿದ್ದ ಬೆಂಗಳೂರಿನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡೆಪ್ಯೂಟಿ ಇನ್‌ಸ್ಪೆಕ್ಟರ್ ಜನರಲ್ ಆಯಂಡ್ ಕಮಿಷನರ್‌ ಆಗಿ ವರ್ಗಾವಣೆ ಮಾಡಲಾಗಿದೆ.

Comments are closed.