ಕರಾವಳಿ

ಪಾಲಿಕೆ ಅಧಿಕಾರಿ ಪುತ್ರಿಗೆ ಕೊರೋನಾ ಸೋಂಕು ಧೃಢ ; 1 ವಾರ ಪಾಲಿಕೆ ಪ್ರವೇಶ ನಿಷೇಧ

Pinterest LinkedIn Tumblr

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾವನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕಾಗಿರುವುದರಿಂದ ದಿನಾಂಕ: 29-06-2020 ಸೋಮವಾರದಿಂದ ಒಂದು ವಾರಗಳ ಕಾಲ ಮಂಗಳೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶನ್ನು ‌ನಿಷೇಧಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನರ ಅಹವಾಲು ಸ್ವೀಕಾರಕ್ಕೆ ಪಾಲಿಕೆ ಕಟ್ಟಡದ ಹೊರಭಾಗದಲ್ಲಿ ಹೆಲ್ಪ್‌ ಡೆಸ್ಕ್ ರಚಿಸಲಾಗಿದೆ ಎಂದವರು ಹೇಳಿದ್ದಾರೆ.

ಮಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಪಾಲಿಕೆಯ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಝ್ ‌ಗೆ ಒಳಪಡಿಸಲಾಗುತ್ತದೆ ಎಂದು ಮನಪಾ ಆಯುಕ್ತ ಅಜಿತ್ ‌ಕುಮಾರ್ ಶಾನಾಡಿ ತಿಳಿಸಿದ್ದಾರೆ.

ಪಾಲಿಕೆಯ ಅಧಿಕಾರಿ ಪುತ್ರಿಗೆ ಸೋಂಕು ಧೃಢ:

ಆದರೆ ಇನ್ನೊಂದು ಮೂಲದ ಪ್ರಕಾರ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಯ ಪುತ್ರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಪಾಲಿಕೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.

ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರ ಪುತ್ರಿ ಗುರುವಾರ ದುಬೈನಿಂದ ಕಣ್ಣೂರು ವಿಮಾನ ನಿಲ್ದಾಣ ಮೂಲಕ ಮನೆಗೆ ಆಗಮಿಸಿದ್ದರು. ಶುಕ್ರವಾರ ಅವರ ಗಂಟಲು ದ್ರವ ಮಾದರಿಯ ವರದಿ ಪಾಸಿಟಿವ್ ಬಂದಿದೆ. ಅದೇ ದಿನ ಅಂದರೆ ಶುಕ್ರವಾರ ಪಾಲಿಕೆಯ ಈ ಅಧಿಕಾರಿ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಗೆ ಆಗಮಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಾಲಿಕೆಯೊಳಗೆ ಜನರ ಪ್ರವೇಶ ನಿಷೇಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Comments are closed.