ಕರಾವಳಿ

ಮಾಸ್ಕ್ ಧರಿಸಿ -ಆರೋಗ್ಯವಂತರಾಗಿ : ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಪಾಲಿಕೆ

Pinterest LinkedIn Tumblr

ಮಂಗಳೂರು : ಕೊರೋನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದ್ದು, ಆದರೆ ಇಂತಹ ಕ್ಲಿಷ್ಟ ಪರಿಸ್ಥಿತಿ ಯಲ್ಲೂ ಕೆಲವರು ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಸಂಚಾರ ಮಾಡುತ್ತಿದ್ದು, ಇಂತವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ದಾಳಿ ಕಾರ್ಯಾಚರಣೆ ಹಮ್ಮಿಕೊಂಡಿದೆ.

ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ, ಮತ್ತು ಆರೋಗ್ಯ ಸ್ಥಾಯಿ ಸಮಿತಿ ನೇತೃತ್ವದಲ್ಲಿ ಪಾಲಿಕೆ ಸದಸ್ಯರು, ಆರೋಗ್ಯ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡದೊಂದಿಗೆ ನಗರದ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕಡ್ಡಾಯ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ವೇಳೆಯಲ್ಲಿ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ರೂಪಾಯಿ 200 ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಲಾಯಿತು. ಮಾತ್ರವಲ್ಲದೇ ಮಾಸ್ಕ್ ಧರಿಸಿ, ನೀವೂ ಆರೋಗ್ಯವಂತರಾಗಿ ಇನ್ನೊಬ್ಬರನ್ನೂ ರಕ್ಷಿಸಿ, ದಂಡ ಪಾವತಿಯಿಂದ ಪಾರಾಗಿ ಎಂಬ ಸಂದೇಶವನ್ನು ನೀಡಲಾಯಿತು.

Comments are closed.