ಕರಾವಳಿ

ದ.ಕ.ಜಿಲ್ಲೆಯಲ್ಲಿ ಇಂದು ಮತ್ತೊಮ್ಮೆ 44 ಪಾಸಿಟಿವ್ ಪತ್ತೆ : ರಾಜ್ಯದಲ್ಲಿ 947 ಮಂದಿಯಲ್ಲಿಸೋಂಕು ಪತ್ತೆ-20 ಮಂದಿ ಕೊರೋನಾಕ್ಕೆ ಬಲಿ

Pinterest LinkedIn Tumblr

ಮಂಗಳೂರು, ಜೂನ್. 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೊಮ್ಮೆ ದಾಖಲೆಯ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಇಂದು ಮತ್ತೆ 44 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕರ್ನಾಟಕದಲ್ಲಿ ಪ್ರತಿದಿನದ ಕೊರೋನ ಪಾಸಿಟಿವ್ ಪ್ರಕರಣಗಳ ಪೈಕಿ ಇಂದು ಮತ್ತೊಮ್ಮೆ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಇಂದು ಮತ್ತೆ ಒಂದೇ ದಿನ ಬರೋಬ್ಬರಿ 947 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಇಂದು ಸೋಂಕಿತರ ಒಟ್ಟು ಸಂಖ್ಯೆ15,242ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಸೋಮವಾರ ಒಂದೇ ದಿನ 947 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿಬರೋಬ್ಬರಿ 44 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 503, ಬಳ್ಳಾರಿ 61, ಹಾವೇರಿ 49, ದಕ್ಷಿಣ ಕನ್ನಡ 44, ಉತ್ತರ ಕನ್ನಡ 40, ವಿಜಯಪುರ 39, ಶಿವಮೊಗ್ಗ 22, ಬೆಂಗಳೂರು ಗ್ರಾಮಾಂತರ 21, ಬೀದರ್ 17, ಧಾರವಾಡ 17, ಹಾಸನ 16, ರಾಯಚೂರು, ಕಲಬುರಗಿಯಲ್ಲಿ ತಲಾ 15, ಚಿಕ್ಕಬಳ್ಳಾಪುರ 13, ದಾವಣಗೆರೆ 12, ರಾಮನಗರ 12, ಚಿಕ್ಕಮಗಳೂರು 10, ಉಡುಪಿ, ಮೈಸೂರಿನಲ್ಲಿ ತಲಾ 9, ಬಾಗಲಕೋಟೆ, ಕೊಡಗು ಜಿಲ್ಲೆಯಲ್ಲಿ ತಲಾ 4, ಕೋಲಾರ, ಚಿತ್ರದುರ್ಗದಲ್ಲಿ ತಲಾ 3, ಯಾದಗಿರಿ, ಮಂಡ್ಯ, ಗದಗ, ಬೆಳಗಾವಿಯಲ್ಲಿ ತಲಾ 2, ತುಮಕೂರಿನಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ.

ರಾಜ್ಯದಲ್ಲಿ ಇಂದು 20 ಮಂದಿ ಕೊರೋನಾಕ್ಕೆ ಬಲಿ :

ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ರಾಜ್ಯದಲ್ಲಿಂದು 20 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ. ಬಳ್ಳಾರಿಯಲ್ಲಿ 6, ಬೆಂಗಳೂರು ನಗರ ಜಿಲ್ಲೆಯಲ್ಲಿ 4, ಹಾವೇರಿ, ವಿಜಯಪುರ, ಧಾರವಾಡದಲ್ಲಿ ತಲಾ 2, ಕೋಲಾರ, ದಾವಣಗೆರೆ, ಬೆಳಗಾವಿ, ಮೈಸೂರಿನಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 246ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 15,242 ಕೊರೋನ ಸೋಂಕಿತರ ಪೈಕಿ 7,918 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 235 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 246 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 7,074 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ ಒಟ್ಟು 436225 ಜನರ ಮೇಲೆ ನಿಗಾ ವಹಿಸಲಾಗಿದ್ದು, ಅದರಲ್ಲಿ 23871 ಪ್ರಥಮ ಸಂಪರ್ಕಿತರು ಹಾಗೂ 19754 ದ್ವಿತೀಯ ಸಂಪರ್ಕಿತರಾಗಿದ್ದಾರೆ. ಅಲ್ಲದೆ, ಇಂದು ಒಟ್ಟು 15588 ಮಾದರಿಗಳನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 14300 ಮಾದರಿಗಳು ನೆಗೆಟಿವ್ ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ 44 ಮಂದಿಗೆ ಕೊರೋನ ಪಾಸಿಟಿವ್ :

ದ.ಕ. ಜಿಲ್ಲೆಯಲ್ಲಿ ರವಿವಾರ ಬರೋಬ್ಬರಿ 44 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 21 ಜನರಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿರುವುದಾಗಿ ವರದಿಯಾಗಿದೆ. 9 ILI, 3 SARI, 3 ಅಂತರ್ ಜಿಲ್ಲಾ ಪ್ರಯಾಣ, 1 ಅಂತರ್ ರಾಜ್ಯ ಪ್ರಯಾಣ, ಸಂಪರ್ಕ ಪತ್ತೆಯಾಗದ 5 ಜನರಿಗೆ ಸೋಂಕು, ಸೌದಿ ಅರೇಬಿಯಾದಿಂದ ಬಂದ ಇಬ್ಬರಿಗೆ ಸೋಂಕು ತಗುಲಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Comments are closed.