ಕರಾವಳಿ

ದ.ಕ.ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ ಕೊರೊನಾ ಸೋಂಕಿಗೆ ಮೂವರು ಬಲಿ

Pinterest LinkedIn Tumblr

ಮಂಗಳೂರು, ಜೂನ್.01 : ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿಗೆ ಮತ್ತೆಮೂವರು ಬಲಿಯಾಗಿದ್ದಾರೆ. ದ.ಕ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲ್ಲೇ ಇದ್ದು, ಜಿಲ್ಲೆಯಲ್ಲಿ ಕೊರೋನದಿಂದ ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ದ.ಕ.ಜಿಲ್ಲೆಯಲ್ಲಿ ಬುಧವಾರ ಒಂದೇ ದಿನದಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳ ಮೂಲದ 31 ವರ್ಷದ ಯುವಕ ಸಾವನ್ನಪ್ಪಿದ್ದು ಯುವಕ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಮತ್ತೊರ್ವರು ಮಂಗಳೂರಿನ ಬೆಂಗ್ರೆ ನಿವಾಸಿ, 51 ವರ್ಷದ ವ್ಯಕ್ತಿ. ಕೋವಿಡ್ -19 ಸೋಂಕು ಪೀಡಿತರಾಗಿದ್ದ ಇವರು ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಭಟ್ಕಳ ನಿವಾಸಿ 79 ವರ್ಷದ ವೃದ್ದ ಕೊರೋನಾಗೆ ಬಲಿಯಾಗಿದ್ದು, ಇವರು ಅಧಿಕ ರಕ್ತದೊತ್ತಡ, ಶ್ವಾಸಕೋಶದ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದರು. ಇವರ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಇವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Comments are closed.