ಕರಾವಳಿ

ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷರ ಕಾರು ಅಪಘಾತ : ಅಧ್ಯಕ್ಷರು ಪಾರು

Pinterest LinkedIn Tumblr

ಮಂಗಳೂರು : ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರ ಕಾರು ಮೂಡಬಿದ್ರೆ ಸಮೀಪದ ಮಿಜಾರು ಸಮೀಪ ಅಪಘಾತಕ್ಕೀಡಾಗಿದ್ದು, ಅಧ್ಯಕ್ಷರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬುಧವಾರ ಮದ್ಯಾಹ್ನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರು ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿದ್ದಾಗ ಮೂಡಬಿದ್ರೆ ಸಮೀಪದ ಮಿಜಾರಿನಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನಿಗೆ ತರಚಿದ ಗಾಯಗಳಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರು ಯಾವೂದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪಾರಾಗಿದ್ದಾರೆ.

ಸುದರ್ಶನ್ ಮೂಡಬಿದ್ರೆ ಅವರು ಮೂಡಬಿದ್ರೆಯಿಂದ ಮಂಗಳೂರಿಗೆ ಇನ್ನೋವಾ ಕಾರಿನಲ್ಲಿ ಬರುತ್ತಿದ್ದಾಗ ಮೂಡಬಿದ್ರೆ ಸಮೀಪದ ಮಿಜಾರು ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಆಗುವುದನ್ನ ತಪ್ಪಿಸಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ರಸ್ತೆ ಪಕ್ಕ ಇದ್ದ ಮಣ್ಣು ತುಂಬಿದ ಕೆಸರಿನಲ್ಲಿ ಜಾರಿ ಸಮೀಪದಲ್ಲಿದ್ದ ಕಂಪೌಂಡ್ ಗೋಡೆಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.

ಅಪಘಾತ ನಡೆದ ಸ್ಥಳಕ್ಕೆ ಮೂಡಬಿದ್ರೆ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

Comments are closed.