ಕರಾವಳಿ

ಪತ್ರಕರ್ತ ಮೊಹಮ್ಮದ್ ಅನ್ಸಾರ್ ಅವರಿಗೆ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ’ ಪ್ರದಾನ

Pinterest LinkedIn Tumblr

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ವೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ಪತ್ರಕರ್ತರಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ವಿಜಯವಾಣಿ ಪತ್ರಿಕೆಯ ಮೊಹಮ್ಮದ್ ಅನ್ಸಾರ್ ಇನೋಳಿ ಆಯ್ಕೆಯಾಗಿದ್ದು, ಬುಧವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ “ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ” ಸಮಾರಂಭದಲ್ಲಿ ಮೆಸ್ಕಾಂ ಪ್ರಧಾನ ವ್ಯವಸ್ಥಾಪಕ ಎಚ್.ಕೆ.ಕೃಷ್ಣಮೂರ್ತಿ ಅವರು ಮೊಹಮ್ಮದ್ ಅನ್ಸಾರ್ ಇನೋಳಿ ಅವರಿಗೆ *ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ* ಮಾಡಿದರು.

ಮಂಗಳೂರು ವಿವಿ ಪರಿಕ್ಷಾಂಗ ಕುಲಸಚಿವ ಡಾ.ಪಿ.ಎಲ್.ಧರ್ಮ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ “`ಪತ್ರಕರ್ತ, ಪತ್ರಿಕೋದ್ಯಮ ಮತ್ತು ಪ್ರಸ್ತುತತೆ” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.

ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯ ತೀರ್ಪುಗಾರರಲ್ಲೊಬ್ಬರಾದ ಸ್ಮಿತಾ ಶೆಣೈ ಅನಿಸಿಕೆ ವ್ಯಕ್ತಪಡಿಸಿದರು. ಜಿಲ್ಲಾವಾರ್ತಾಧಿಕಾರಿ ಖಾದರ್ ಷಾ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

‘ಸಂಬಂಧ ಗಟ್ಟಿಗೊಳಿಸಿದ ರಮಜಾನ್’ ವರದಿಗೆ ಪ್ರಶಸ್ತಿ :

ವಿಜಯವಾಣಿಯಲ್ಲಿ 2019, ಮೇ 21ರಂದು ಪ್ರಕಟಗೊಂಡ ‘ಸಂಬಂಧ ಗಟ್ಟಿಗೊಳಿಸಿದ ರಮಜಾನ್’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿತ್ತು.

ಹಿರಿಯ ಪತ್ರಕರ್ತರಾದ ಸುರೇಂದ್ರ ಶೆಟ್ಟಿ, ರವಿಪ್ರಸಾದ್ ಕಮಿಲ ಮತ್ತು ಉಪನ್ಯಾಸಕಿ ಸ್ಮಿತಾ ಶೆಣೈ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ಈ ಆಯ್ಕೆ ನಡೆಸಿತ್ತು.

Comments are closed.