ಮಂಗಳೂರು, ಜುಲೈ. 03 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೊಮ್ಮೆ ದಾಖಲೆಯ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಇಂದು ಮತ್ತೆ 97 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಪ್ರತಿದಿನದ ಕೊರೋನ ಪಾಸಿಟಿವ್ ಪ್ರಕರಣಗಳ ಪೈಕಿ ಇಂದು ಮತ್ತೊಮ್ಮೆ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಇಂದು ಮತ್ತೆ ಒಂದೇ ದಿನ ಬರೋಬ್ಬರಿ 1694 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಇಂದು ಸೋಂಕಿತರ ಒಟ್ಟು ಸಂಖ್ಯೆ19710ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಬುಧವಾರ ಒಂದೇ ದಿನ 1694 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿಬರೋಬ್ಬರಿ 97 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 994, ಬಳ್ಳಾರಿ 97, ದಕ್ಷಿಣ ಕನ್ನಡ 97, ಕಲಬುರಗಿ 72, ತುಮಕೂರು 57, ಬೆಂಗಳೂರು ಗ್ರಾಮಾಂತರ 44, ಧಾರವಾಡ 38, ಮೈಸೂರು 35, ಮಂಡ್ಯ 33, ಬೀದರ್ 28, ಚಾಮರಾಜನಗರ 24, ಶಿವಮೊಗ್ಗ 23, ಗದಗ 19, ಉಡುಪಿ 16, ಕೊಡಗು 16, ಯಾದಗಿರಿ 14, ಹಾಸನ 13, ಬೆಳಗಾವಿ 13, ಕೋಲಾರ 11, ರಾಮನಗರ 10, ಬಾಗಲಕೋಟೆ 8, ರಾಯಚೂರು 7, ಉತ್ತರ ಕನ್ನಡ ಮತ್ತು ದಾವಣಗೆರೆ ತಲಾ 5, ವಿಜಯಪುರ ಮತ್ತು ಕೊಪ್ಪಳದಲ್ಲಿ ತಲಾ 4, ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 3, ಹಾವೇರಿಯಲ್ಲಿ 1 ಪ್ರಕರಣ ಪಾಸಿಟಿವ್ ಬಂದಿದೆ.
ದ.ಕ. ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ : ಹೆಚ್ಚಿದ ಆತಂಕ
ದ.ಕ. ಜಿಲ್ಲೆಯಲ್ಲಿ ಇಂದು ಮತ್ತೆ 97 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1010ಕ್ಕೆ ಏರಿಕೆಯಾಗಿದೆ.
ಶುಕ್ರವಾರದಂದು 425 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದೆ. ದೊಡ್ಡ ಸಂಖ್ಯೆಯಲ್ಲಿ ಪರೀಕ್ಷಾ ವರದಿ ಲಭ್ಯವಾಗಿರುವ ಕಾರಣದಿಂದಾಗಿ 97 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಉಳಿದಂತೆ 328 ಮಂದಿಯ ವರದಿ ನೆಗೆಟಿವ್ ಆಗಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 498 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 503 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ರಾಜ್ಯದಲ್ಲಿ 21 ಮಂದಿ ಕೊರೋನಾ ಸೋಂಕಿಗೆ ಬಲಿ :
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 21 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 5, ವಿಜಯಪುರ 2, ಕಲಬುರಗಿ 3, ಚಿಕ್ಕಬಳ್ಳಾಪುರ 3, ಶಿವಮೊಗ್ಗ 2, ಬಳ್ಳಾರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೀದರ್, ದಾವಣಗೆರೆ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ 1 ಒಂದು ಸಾವು ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 293ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
.
ಕರ್ನಾಟಕದಲ್ಲಿ ಕೊರೋನ ವೈರಸ್ ತೀವ್ರಗತಿಯಲ್ಲಿ ಏರುತ್ತಿದ್ದು, ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಒಟ್ಟಾರೆ ರಾಜ್ಯದಲ್ಲಿ 19,710 ಕೊರೋನ ಸೋಂಕಿತರ ಪೈಕಿ 8,805 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 471 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 293 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 10,608 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.