ಕರಾವಳಿ

ದ.ಕ ಜಿಲ್ಲೆಯಲ್ಲಿ ಕೊರೋನಾ ಮರಣ ಮೃದಂಗ : ಮತ್ತೆ ಮೂವರು ಬಲಿ

Pinterest LinkedIn Tumblr

ಮಂಗಳೂರು, ಜುಲೈ.04: ಮಹಾಮಾರಿ ಕೊರೋನಾಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂವರು ಬಲಿಯಾಗಿದ್ದಾರೆ.ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಇಂದು ಬೆಳಗ್ಗೆ ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೊನಾಗೆ ಬಲಿಯಾಗಿದ್ದರು. ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಇವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವೃದ್ಧೆ ವಾರದ ಹಿಂದೆ ಅಸೌಖ್ಯಕ್ಕೊಳಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ದಾಖಲಾಗಿದ್ದರು.

ಆಸ್ಪತ್ರೆಯ ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ ನಡೆಸಿದಾಗ ಒಬ್ಬ ನರ್ಸ್ ಗೆ ಸೋಂಕು ದೃಢಪಟ್ಟಿತ್ತು. ಅದೇ ನರ್ಸ್ ಐಸಿಯುನಲ್ಲಿ ದಾಖಲಾಗಿದ್ದ ವೃದ್ಧೆಗೂ ಚಿಕಿತ್ಸೆ ನೀಡುತ್ತಿದ್ದರೆನ್ನಲಾಗಿದೆ. ಕೊರೋನ ಪರೀಕ್ಷೆಗೆ ಗಂಟಲ ದ್ರವ ತೆಗೆಯಲಾಗಿದ್ದು ವರದಿ ಬರುವ ಮೊದಲೇ ವೃದ್ಧೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದೀಗ ವೃದ್ಧೆಯ ಕೊರೋನ ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.ಇನ್ನೋರ್ವ ಮಹಿಳೆ ಹಾಗೂ ಪುರುಷ ಕೊರೋನಾಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಮಾರಕ ಕೊರೋನಾಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Comments are closed.