ಮಂಗಳೂರು, ಜುಲೈ 05 : ದ.ಕ. ಜಿಲ್ಲೆಯ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಯವರಿಗೆ ಕೊರೊನಾ ದೃಢವಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಪೂಜಾರಿಯವರ ಕೋವಿಡ್ ತಪಾಸಣೆ ನಡೆಸಲಾಗಿದ್ದು, ಗಂಟಲ ದ್ರವದ ಮಾದರಿಯ ಪರೀಕ್ಷೆಯಲ್ಲಿ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಹಾಗೂ ಅವರ ಪತ್ನಿಗೂ ಕೂಡಾ ಸೋಂಕು ಇರುವುದು ಪತ್ತೆಯಾಗಿದೆ.
ಜನಾರ್ಧನ ಪೂಜಾರಿಯವರು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಂಕು ದೃಢವಾಗಿದ್ದರೂ, ಸೋಂಕು ಸಂಬಂಧಿಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಅವರು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಪೂಜಾರಿ ಕ್ಷೇಮವಾಗಿದ್ದಾರೆ : ಸಂತೋಷ್ ಜೆ. ಪೂಜಾರಿ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರಿಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಕ್ಷೇಮವಾಗಿದ್ದು, ಕೊರೊನಾ ಸಂಬಂಧಿಸಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ದಯವಿಟ್ಟು ಯಾರೂ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಅವರು ಸಂಪೂರ್ಣ ಗುಣಮುಖರಾಗಲು ನಾವೆಲ್ಲರೂ ಪ್ರಾರ್ಥಿಸೋಣ. ಧನ್ಯವಾದಗಳು…. ಎಂದು ಜನಾರ್ದನ ಪೂಜಾರಿಯವರ ಹಿರಿಯ ಮಗ ಸಂತೋಷ್ ಜೆ. ಪೂಜಾರಿ ತಿಳಿಸಿದ್ದಾರೆ.
Comments are closed.