ಕರಾವಳಿ

ದ.ಕ.ಜಿಲ್ಲೆಯಲ್ಲಿ ಬುಧವಾರ ಮತ್ತೆ ಮೂವರು ಕೊರೋನಾಕ್ಕೆ ಬಲಿ: ಮೃತರ ಸಂಖ್ಯೆ 29ಕ್ಕೆ ಏರಿಕೆ

Pinterest LinkedIn Tumblr

ಮಂಗಳೂರು, ಜುಲೈ.8: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೆ ಮೂವರು ಕೊರೋನಾಕ್ಕೆ ಬಲಿಯಾಗಿದ್ದಾರೆ. ಕೊರೋನ ಪಾಸಿಟಿವ್ ಆಗಿದ್ದ ಈ ಮೂವರೂ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರೆನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಕೊರೋನ ಸೋಂಕಿತರ ಸಾವಿನ ಸಂಖ್ಯೆ ಏರುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೊನಾದಿಂದ ಉಳ್ಳಾಲ, ಪುತ್ತೂರು, ಹಾಗೂ ಭಟ್ಕಳ ಮೂಲದ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂವರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಮೂರು ಸಾವಿನೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 29ಕ್ಕೇರಿಕೆಯಾಗಿದೆ.

Comments are closed.