ಕರಾವಳಿ

ಆಟದ ಆಯನ (ಕುಸಾಲ್ದ ಯಕ್ಷ ಜಾತ್ರೆ) : “ಬಂಗಾರ್ ಬೊಡೆದಿ” ಯಕ್ಷಗಾನ ಪ್ರದರ್ಶನ

Pinterest LinkedIn Tumblr

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ನಮ್ಮ ಟಿ.ವಿಯ ಸಹಯೋಗದೊಂದಿಗೆ ಯಕ್ಷಗಾನ ಹಾಸ್ಯ ಕಲಾವಿದರ ಒಕ್ಕೂಟದ ವತಿಯಿಂದ ಕೋವಿಡ್-19 ನಿಂದ ಸಂಕಷ್ಟಕ್ಕೆ ಒಳಗಾದ ಯಕ್ಷಗಾನ ಹಾಸ್ಯ ಕಲಾವಿದರ ನೆರವಿಗಾಗಿ ಆಟದ ಆಯನ” ಎಂಬ ವಿನೂತನ ಯಕ್ಷಗಾನ ಪ್ರದರ್ಶನದಲ್ಲಿ ”ಬಂಗಾರ್ ಬೊಡೆದಿ” ಎಂಬ ತುಳು ಯಕ್ಷಗಾನ ಪ್ರಸಂಗವನ್ನು ಅಕಾಡೆಮಿಯ ಸಿರಿ ಚಾವಡಿಯಲ್ಲಿ ಆಯೋಜಿಸಲಾಯಿತು.

 ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ದಯಾನಂದ ಜಿ.ಕತ್ತಲ್‌ಸಾರ್ ರವರ ಅಧ್ಯಕ್ಷತೆಯಲ್ಲಿ, ಉದ್ಯಮಿ ಶ್ರೀ ಹರೀಶ್ ಜೆ. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಅಕಾಡೆಮಿಯ ಸದಸ್ಯರಾದ ಶ್ರೀ ನಿಟ್ಟೆ ಶಶಿಧರ್ ಶೆಟ್ಟಿ, ಶ್ರೀಮತಿ ವಿಜಯಲಕ್ಷ್ಮೀ ಪಿ.ರೈ ಭಾಗವಹಿಸಿದ್ದರು.

ಅಕಾಡೆಮಿಯ ಸದಸ್ಯರಾದ ಶ್ರೀ ಕಡಬ ದಿನೇಶ್ ರೈ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀ ಚೇತಕ್ ಪೂಜಾರಿ ವಂದನೆಯನ್ನು ಮಾಡಿದರು.

Comments are closed.