ಕರಾವಳಿ

SSLC ಮೌಲ್ಯಮಾಪನ ಹಿನ್ನೆಲೆ : ಜುಲೈ.13ರಿಂದ ನಿಷೇಧಾಜ್ಞೆ- ವಿದ್ಯಾರ್ಥಿಗಳಲ್ಲಿ ಫಲಿತಾಂಶದ ನಿರೀಕ್ಷೆ

Pinterest LinkedIn Tumblr

 

ಮಂಗಳೂರು ಜುಲೈ 09 : ಎಸ್.ಎಸ್.ಎಲ್.ಸಿ. ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 13ರಿಂದ ಜುಲೈ 20ರವರೆಗೆ ದ.ಕ. ಜಿಲ್ಲೆಯಲ್ಲಿ ಮೌಲ್ಯಮಾಪನ ನಡೆಯುವ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರಂತೆ ನಿಷೇಧಾಜ್ಞೆಯನ್ನು ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.

ಕೊರೋನಾ ಭೀತಿಯ ನಡುವೆಯೇ ನಡೆದ SSLC ಪರೀಕ್ಷೆ: ವಿದ್ಯಾರ್ಥಿಗಳಲ್ಲಿ ಫಲಿತಾಂಶದ ನಿರೀಕ್ಷೆ

ಜೂನ್ 25ರಂದು ಆರಂಭಗೊಂಡಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆ ಜುಲೈ 3ರಂದು ಕೊನೆಗೊಂಡಿತ್ತು. ಕೊರೋನಾ ಭೀತಿಯ ನಡುವೆಯೇ ಎಸ್.ಎಸ್.ಎಲ್.ಸಿ. .ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದ್ದು, ಇದರಿಂದ ಕೊರೋನಾ ಸೋಂಕಿನ ಆತಂಕದಲ್ಲಿದ್ದ ಪೋಷಕರು ನಿಟ್ಟಿಸಿರು ಬಿಟ್ಟಿದ್ದರು.

ಸರ್ಕಾರದ ವತಿಯಿಂದ ಹಲವು ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದ್ದರೂ ಕೊರೋನಾ ಸೋಂಕಿನ ಭೀತಿಯಲ್ಲಿದ್ದ ವಿದ್ಯಾರ್ಥಿಗಳು ಭಯದಿಂದಲೇ ತಮ್ಮ ಭವಿಷ್ಯ ನಿರ್ಧರಿಸುವ ಅಗ್ನಿ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದಿದ್ದರು. ಜುಲೈ 13 ರಿಂದ ಜುಲೈ 20 ರವರೆಗೆ ದ.ಕ. ಜಿಲ್ಲೆಯಲ್ಲಿ ಮೌಲ್ಯಮಾಪನ ನಡೆಯಲಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಇದೀಗ ತಮ್ಮ ಫಲಿತಾಂಶಕ್ಕಾಗಿ ಕಾಯುತಿದ್ದು, ಇನ್ನು ಕೆಲವೇ ದಿನಗಳಲ್ಲಿ ಈ ವಿದ್ಯಾರ್ಥಿಗಳ ಮುಂದಿನ ತೀರ್ಮಾನದ ಭವಿಷ್ಯ ನಿರ್ಧಾರವಾಗಲಿದೆ.

Comments are closed.