ಕರಾವಳಿ

ರಾಜ್ಯದಲ್ಲಿ ಇಂದು 2,228 ಮಂದಿಯಲ್ಲಿ ಪಾಸಿಟಿವ್ ಪತ್ತೆ – 17 ಮಂದಿ ಸೋಂಕಿಗೆ ಬಲಿ

Pinterest LinkedIn Tumblr

ಮಂಗಳೂರು /ಬೆಂಗಳೂರು, ಜುಲೈ.09 :. ಕರ್ನಾಟಕದಲ್ಲಿ ಇಂದು ಮತ್ತೆ ಒಂದೇ ದಿನ ಬರೋಬ್ಬರಿ 2,228 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.

ಈ ಮೂಲಕ ರಾಜ್ಯದಲ್ಲಿ ಇಂದು ಸೋಂಕಿತರ ಒಟ್ಟು ಸಂಖ್ಯೆ 31,105ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಮಹಾಸ್ಫೋಟಗೊಂಡಿದ್ದು, ಮತ್ತೊಮ್ಮೆ ಅತೀ ಹೆಚ್ಚು 167 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ದ.ಕ.ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1709ಕ್ಕೆ ಕ್ಕೆ ಏರಿಕೆಯಾಗಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರಾಜ್ಯದಲ್ಲಿ ಸೋಮವಾರ ಒಂದೇ ದಿನ 2,228 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ ಬರೋಬ್ಬರಿ 167 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.

ರಾಜ್ಯದಲ್ಲಿ ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1,373, ದಕ್ಷಿಣ ಕನ್ನಡ 167, ಕಲಬುರಗಿ 85, ಧಾರವಾಡ 75, ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರ ಕನ್ನಡ 23, ಉಡುಪಿ 22, ಹಾಸನ 21, ಹಾವೇರಿ 18, ರಾಮನಗರ 17, ರಾಯಚೂರು 16, ಯಾದಗಿರಿ 16, ಬೆಂಗಳೂರು ಗ್ರಾಮಾಂತರ 16, ಬೀದರ್ 15, ಚಾಮರಾಜನಗರ 12, ಬೆಳಗಾವಿ 9, ಗದಗ 6, ಚಿಕ್ಕಮಗಳೂರು 5, ಕೊಡಗು 4, ಕೊಪ್ಪಳ 2, ಚಿತ್ರದುರ್ಗ 2 ಮತ್ತು ವಿಜಯಪುರದಲ್ಲಿ 1 ಪ್ರಕರಣ ಪಾಸಿಟಿವ್ ಬಂದಿದೆ.

ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಇಂದು ಒಂದೇ ದಿನ 17 ಮಂದಿ ಬಲಿ :

ರಾಜ್ಯದಲ್ಲಿ ಕೊರೋನ ವೈರಸ್ ನಾಗಾಲೋಟ ಮುಂದುವರಿದಿದ್ದು, ಇಂದು ಒಂದೇ ದಿನ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಅಲ್ಲದೇ, 2,228 ಮಂದಿಗೆ ಸೋಂಕು ದೃಢಪಟ್ಟಿದೆ

ರಾಜ್ಯದಲ್ಲಿ ದೃಢಪಟ್ಟ 2,228 ಪ್ರಕರಣಗಳ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 31,105ಕ್ಕೆ ಏರಿಕೆಯಾಗಿದೆ. 17 ಸಾವಿನೊಂದಿಗೆ ಮೃತರ ಸಂಖ್ಯೆ 486ಕ್ಕೆ ಹೆಚ್ಚಳವಾಗಿದೆ.

ಧಾರವಾಡದಲ್ಲಿ ಇಂದೂ ಕೂಡಾ 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂತೆ ಹಾಸನ 2, ಮೈಸೂರು 2, ಕಲಬುರಗಿ 2, ದಾವಣಗೆರೆ, ತುಮಕೂರು, ರಾಯಚೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಒಂದು ಸಾವು ಸಂಭವಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 31,105 ಕೊರೋನ ಸೋಂಕಿತರ ಪೈಕಿ 12,833 ಮಂದಿ ಸಂಪೂರ್ಣ ಗುಣಮುಖ ರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 957 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 486 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 17,782 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೋಂಕಿತರು : ಸೋಂಕಿಗೆ ಓರ್ವ ಬಲಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಗುರುವಾರ 167 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ ದೃಢಪಟ್ಟ ಕೊರೊನಾ ಸೋಂಕು ಪ್ರಕರಣಗಳಲ್ಲಿ ಈ ದಿನ ಮತ್ತೆ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿದೆ.

ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 42 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 6 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. ಬೆಂಗಳೂರಿನಿಂದ ಮರಳಿದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್, ದುಬೈಯಿಂದ ಮರಳಿದ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಪ್ರೀಸರ್ಜರಿ ಸ್ಯಾಂಪಲ್ ಪಾಸಿಟಿವ್ 13 ಮಂದಿಯಲ್ಲಿ ದೃಢಪಟ್ಟಿದೆ. 38 ಸೋಂಕಿತರ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿದೆ. ಇನ್ನು ಈ ನಡುವೆ ಜಿಲ್ಲೆಯಲ್ಲಿ 702 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 977 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Comments are closed.