ಕರಾವಳಿ

ದ.ಕ. ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಮತ್ತೆ ಏಳು ಮಂದಿ ಬಲಿ

Pinterest LinkedIn Tumblr

ಮಂಗಳೂರು, ಜುಲೈ 10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು. ಶುಕ್ರವಾರ ಈ ಮಾಹಮಾರಿಗೆ 7ಮಂದಿ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಏಳು ಮಂದಿ ಕೋವಿಡ್ 19 ಸೋಂಕಿತರು ಸಾವನ್ನಪ್ಪುವ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ಮಂಗಳೂರಿನ ಕೋವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ನಾಲ್ವರು ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತರ ಪೈಕಿ 6 ಮಂದಿ ಪುರುಷರು ಹಾಗೂ ಓರ್ವ ಮಹಿಳೆ ಸೇರಿಕೊಂಡಿದ್ದಾರೆ. 35, 65, 67, 48, 57, 68 ವರ್ಷದ ಪುರುಷರು ಸೋಂಕಿಗೆ ಬಲಿಯಾಗಿದ್ದಾರೆ. 58 ವರ್ಷದ ವೃದ್ದೆ ಸೋಂಕಿನಿಂದ ಮೃತಪಟ್ಟಿದ್ದಾರೆ.

ತೊಕ್ಕೊಟ್ಟು ನಿವಾಸಿ 58 ವರ್ಷದ ಮಹಿಳೆ, ಫಳ್ನೀರ್ ನ 65 ವರ್ಷದ ಪುರುಷ, ಉಳ್ಳಾಲದ 67 ವರ್ಷದ ಪುರುಷ, ಹೊಸ ಬೆಟ್ಟುವಿನ 35 ವರ್ಷದ ಯುವಕ ಸಾವನ್ನಪ್ಪಿದವರು. ಖಾಸಗಿ ಆಸ್ಪತ್ರೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಈ ನಡುವೆ 51 ಮಂದಿ ಶುಕ್ರವಾರದಂದು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂದಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ 753 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Comments are closed.