ಕರಾವಳಿ

ಉಡುಪಿಯಲ್ಲಿ ಶನಿವಾರ ಕೊರೋನಾ ಸ್ಫೋಟ: ಒಂದೇ ದಿನ 90 ಜನರಿಗೆ ಸೋಂಕು ದೃಢ

Pinterest LinkedIn Tumblr

ಉಡುಪಿ: ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಶನಿವಾರ ಮತ್ತೆ ಕೋವಿಡ್ ಸ್ಪೋಟವಾಗಿದೆ. ಜಿಲ್ಲೆಯಲ್ಲಿಂದು 90 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇಂದಿನ 90 ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1567ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 663 ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 90 ಜನರ ಸ್ಯಾಂಪಲ್ ಪಾಸಿಟಿವ್ ಬಂದಿದ್ದು, ಉಳಿದ 573 ಜನರ ವರದಿ ನೆಗೆಟಿವ್ ಆಗಿದೆ.

ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1567ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 1245 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 319 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 21,678 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಅದರಲ್ಲಿ 1567 ವರದಿಗಳು ಪಾಸಿಟಿವ್ ಆಗಿದೆ. 18,081 ಜನರ ವರದಿಗಳು ನೆಗಟಿವ್ ಆಗಿದ್ದು, ಇನ್ನೂ 2030 ಜನರ ಪರೀಕ್ಷಾ ವರದಿ ಬಾಕಿ ಉಳಿದಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 90 ಮಂದಿಗೆ ಸೋಂಕು ತಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

Comments are closed.