ಕರಾವಳಿ

ದ.ಕ.ಜಿಲ್ಲೆಯಲ್ಲಿ ಶನಿವಾರ ಮತ್ತೆ ಕೊರೋನಾಘಾತ – ಬರೊಬ್ಬರಿ 186 ಮಂದಿಯಲ್ಲಿ ಸೋಂಕು ಪತ್ತೆ

Pinterest LinkedIn Tumblr

ಮಂಗಳೂರು, ಜುಲೈ.11 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಶನಿವಾರ ಮತ್ತೊಮ್ಮೆ ದಾಖಲೆಯ 186 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಕೊರೊನಾ ಸೋಂಕು ಪ್ರಕರಣಗಳಲ್ಲಿ ಈ ದಿನ ಮತ್ತೊಮ್ಮೆ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ. ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1848 ಇತ್ತು. ಆದರೆ ಇಂದು ಒಂದೇ ದಿನ 186 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಸಂಖ್ಯೆ ಎರಡು ಸಾವಿರ ದಾಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2034ಕ್ಕೆ ಏರಿಕೆಯಾಗಿದೆ.

ಬಹುತೇಕ ಪ್ರಕರಣಗಳಲ್ಲಿ ಸೋಂಕಿನ ಮೂಲವೇ ಪತ್ತೆಯಾಗದಿರುವುದು ಜಿಲ್ಲೆಯನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ಸದ್ಯ 1211 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ಶನಿವಾರದಂದು 29 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನು ಇಲ್ಲಿಯ ತನಕ 20798 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದೆ.

ಇಂದಿನ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೋನಾ ಸ್ಪೋಟ

ಮಂಗಳೂರಿನಲ್ಲಿ ಇಂದು ಬರೋಬ್ಬರಿ 186 ಪಾಸಿಟಿವ್ ಪತ್ತೆ

ದಿನೇ ದಿನೇ ಕರಾವಳಿಯಲ್ಲಿ ಹೆಚ್ಚಾಗುತ್ತಿದೆ ಸೋಂಕಿತರ ಸಂಖ್ಯೆ

ILI – 64 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 37 ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 32 ಮಂದಿಗೆ ಕೊರೋನಾ ಪಾಸಿಟಿವ್

SARI – 17 ಮಂದಿಗೆ ಕೊರೋನಾ ಪಾಸಿಟಿವ್

ರ್‍ಯಾಂಡಮ್ ಟೆಸ್ಟ್ ನಿಂದ 13 ಮಂದಿಗೆ ಪಾಸಿಟಿವ್

ವಿದೇಶದಿಂದ ಬಂದ 10 ಮಂದಿಗೆ ಕೊರೋನಾ ಸೋಂಕು ದೃಢ

ಶಸ್ತ್ರಚಿಕಿತ್ಸೆಯ ಮೊದಲು ಮಾಡಿದ ಟೆಸ್ಟ್ ನಿಂದ 7 ಮಂದಿಗೆ ಕೊರೋನಾ ಪಾಸಿಟಿವ್

ಹೆರಿಗೆಗಿಂತ ಮೊದಲು ಮಾಡಿದ ಟೆಸ್ಟ್‌ ‌ನಲ್ಲಿ‌ 4 ಮಹಿಳೆಯರಿಗೆ ಕೊರೋನಾ ಸೋಂಕು

ಹೊರ‌ಜಿಲ್ಲೆಯಿಂದ ಬಂದ ಇಬ್ಬರಿಗೆ ಕೊರೋನಾ ಪಾಸಿಟಿವ್

ದ.ಕ ಜಿಲ್ಲೆಯಲ್ಲಿ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿದೆ ಸೋಂಕು

ಪ್ರತಿದಿನ‌ 100 ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ಗಳು ಪತ್ತೆ.

Comments are closed.