ಕರಾವಳಿ

ಮಂಗಳೂರು ಪಾಲಿಕೆ ಅಯುಕ್ತರಿಗೆ ಕೊರೋನ ಪಾಸಿಟಿವ್ : ಖಾಸಗಿ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಮಂಗಳೂರು, ಜುಲೈ.12 : ಮಂಗಳೂರು ಮಹಾನಗರ ಪಾಲಿಕೆ ಅಯುಕ್ತರಾದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆಯವರಿಗೆ ಕೊರೋನಾ ಸೋಂಕು ಧೃಢಪಟ್ಟಿದ್ದು, ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎರಡು ದಿನಗಳ ಹಿಂದೆ ಅವರಲ್ಲಿ ಜ್ವರದ ಲಕ್ಷಣ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ಗಂಟಲು ದ್ರವ ಮಾದರಿಯನ್ನು ವೈದ್ಯ ಸಿಬ್ಬಂದಿ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿದ್ದರು. ರವಿವಾರ ಬೆಳಗ್ಗೆ ಬಂದ ವರದಿಯಲ್ಲಿ ಮನಪಾ ಕಮಿಷನರ್ ಅವರಿಗೆ ಕೊರೋನ ಪಾಸಿಟಿವ್ ಇರುವುದು ಪತ್ತೆಯಾಗಿದೆ.

ಆಯುಕ್ತರ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಮನಪಾ ಸದಸ್ಯರು ಸೇರಿದಂತೆ ಹಲವಾರು ಮಂದಿ ಪಾಲಿಕೆ ಅಯುಕ್ತರು ಶೀಘ್ರ ಗುಣಮುಖವಾಗಿ ಬರಲಿ ಎಂದು ಪ್ರಾರ್ಥಿಸಿದ್ದಾರೆ. ಹಲವಾರು ಮಂದಿ ತಮ್ಮ ಟ್ವಿಟ್ ಖಾತೆ ಮತ್ತು ಫೇಸ್ ಬುಕ್ ಖಾತೆಗಳಲ್ಲಿ ಈ ಬಗ್ಗೆ ಬರಹಗಳನ್ನು ಹಂಚಿಕೊಂಡಿದ್ದಾರೆ.

Comments are closed.