ಕರಾವಳಿ

ಬ್ರೇಕಿಂಗ್ ನ್ಯೂಸ್ : ದ.ಕ.ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಜಾರಿ

Pinterest LinkedIn Tumblr

ಮಂಗಳೂರು, ಜುಲೈ.13 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ.16ರಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರ ಸಹಿತ ಹಲವು ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟಾ ತಿಳಿಸಿದ್ದಾರೆ.

ಸಭೆಯ ಬಳಿಕ ಮಾದ್ಗ್ಯಮಕ್ಕೆ ವೀಡಿಯೋ ಸಂದೇಶ ಕಳುಹಿಸಿದ ಉಸ್ತುವಾರಿ ಸಚಿವರು, ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವು ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಇದೇ ವೇಳೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿದ್ದು, ಸಾರ್ವಜನಿಕರಿಂದ ಕೊರೊನಾ ನಿಯಂತ್ರಣಕ್ಕಾಗಿ ಒಂದಷ್ಟು ದಿನಗಳ ಕಾಲ ಮತ್ತೆ ಲಾಕ್ ಡೌನ್ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಈ ಹಿನ್ನಲೆಯಲ್ಲಿ ಜು.16 ರಿಂದ ಒಂದು ವಾರಗಳ ಕಾಲ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗುವುದು. ಮಂಗಳವಾರ ಮತ್ತು ಬುಧವಾರ ಇನ್ನು ಎರಡು ದಿನಗಳ ನಾಗರೀಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಕಾಲಾವಾಕಾಶ ಇರುವುದರಿಂದ ಸಾರ್ವಜನಿಕರು ಒಂದು ವಾರಗಳಿಗೆ ಅಗತ್ಯವಿರುವಷ್ಟು ದಿನಸಿ ಸಾಮಾಗ್ರಿ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಖರೀದಿ ಮಾಡಿಟ್ಟುಕೊಳ್ಳಬೇಕು” ಎಂದು ಸಚಿವರು ಮನವಿ ಮಾಡಿದ್ದಾರೆ.

ಇದೇ ವೇಳೆ ಲಾಕ್ ಡೌನ್ ಸಂದರ್ಭ ಏನಿರುತ್ತೆ, ಏನಿರುವುದಿಲ್ಲ ಎಂಬ ಬಗ್ಗೆ ಲಾಕ್ ಡೌನ್ ಕುರಿತ “ಮಾರ್ಗಸೂಚಿ ಮತ್ತು ನಿಯಮ”ಗಳನ್ನು ಶೀಘ್ರದಲ್ಲೇ ಜಿಲ್ಲಾಧಿಕಾರಿಗಳು ಪ್ರಕಟಿಸಲಿದ್ದಾರೆ. ಜಿಲ್ಲೆಯ ಜನತೆ ಲಾಕ್ ಡೌನ್ ಹಾಗೂ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್

ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಲಾಕ್ ಡೌನ್

ಗುರುವಾರದಿಂದ ಒಂದು ವಾರಗಳ ಕಾಲ ಲಾಕ್ ಡೌನ್

ಬುಧವಾರ ತನಕ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ

ದ.ಕ‌.ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ.

Comments are closed.