ಕರಾವಳಿ

ದ.ಕ.ಜಿಲ್ಲೆಯಲ್ಲಿ ಮಾಸ್ಕ್ ಕಡ್ಡಾಯ : ಧರಿಸದಿದ್ದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ

Pinterest LinkedIn Tumblr

ಮಂಗಳೂರು, ಜುಲೈ.13: ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.

ಆದರೆ ಹಲವಾರು ಮಂದಿ ಮಾಸ್ಕ್ ಧರಿಸದೆ ಓಡಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ದ.ಕ. ಜಿಲ್ಲೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಸುದ್ಧಿಗಾರರ ಜೊತೆ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲಾಡಳಿತ ಹಲವು ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಸೋಮವಾರದಿಂದ ಇನ್ನು ಮುಂದೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.

ಈ ಹಿನ್ನೆಲೆಯಲ್ಲಿಸಾರ್ವಜನಿಕ ಸ್ಥಳಗಳಿಗೆ ತೆರಳುವ ಸಂದರ್ಭದಲ್ಲಿ, ವಾಹನಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ಕಚೇರಿಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಮಾತ್ರವಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Comments are closed.