ಕರಾವಳಿ

ದ.ಕ.ಜಿಲ್ಲೆಯಲ್ಲಿ ಸೋಮವಾರ 131 ಮಂದಿಯಲ್ಲಿ ಸೋಂಕು ಪತ್ತೆ

Pinterest LinkedIn Tumblr

ಮಂಗಳೂರು, ಜುಲೈ.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಸೋಮವಾರ ಮತ್ತೊಮ್ಮೆ 131 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಕೊರೊನಾ ಸೋಂಕು ಪ್ರಕರಣಗಳಲ್ಲಿ ಸೋಮವಾರ ಮತ್ತೊಮ್ಮೆ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ. ರವಿವಾರ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2230 ಇತ್ತು. ಆದರೆ ಸೋಮವಾರ ಒಂದೇ ದಿನ 131 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಸಂಖ್ಯೆ2361ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಸೋಮವಾರ ಹೊಸದಾಗಿ ಸೋಂಕು ಪತ್ತೆಯಾದ 131 ಮಂದಿಯಲ್ಲಿ ಕೇವಲ 16 ಮಂದಿಗೆ ಮಾತ್ರ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಬಂದಿದ್ದರೆ, ಇನ್ಫ್ಲೂಯೆನ್ಜಾ ಲೈಕ್ ಇಲ್ನೆಸ್ (ಶೀತ) 63 ಪ್ರಕರಣಗಳು ಪತ್ತೆಯಾಗಿವೆ. ಎಸ್‌ಎಆರ್‌ಐ (ತೀವ್ರ ಉಸಿರಾಟ ಸಮಸ್ಯೆ) 10 ಪ್ರಕರಣಗಳು ಇವೆ. ವಿದೇಶದಿಂದ ಬಂದ ನಾಲ್ವರಿಗೆ ಪಾಸಿಟಿವ್ ದೃಢಪಟ್ಟಿದೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲೆ ನಿರ್ಮಿಸುತ್ತಿವೆ. ಆತಂಕದ ಸಂಗತಿಯೆಂದರೆ, ಇವರಲ್ಲಿ ಸೋಂಕು ಮೂಲವೇ ಪತ್ತೆಯಾಗದ ಬರೋಬ್ಬರಿ 38 ಪ್ರಕರಣಗಳು ಸೋಮವಾರ ದಾಖಲಾಗಿವೆ. ದ.ಕ. ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ 62 ಮಂದಿ ಸೋಮವಾರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವರಲ್ಲಿ ಹೆಚ್ಚಿನವರು ಯುವಕರೇ ಆಗಿದ್ದರೆ, ಹಿರಿಯ ನಾಗರಿಕರೂ ಸೇರಿದ್ದಾರೆ ಎಂದು ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದೆ.

ಸೋಮವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರವೂ ಕೊರೋನಾ ಸ್ಪೋಟ

ಜಿಲ್ಲೆಯಲ್ಲಿ ಸೋಮವಾರ ಬರೋಬ್ಬರಿ 131 ಕೊರೋನಾ ಪಾಸಿಟಿವ್ ಪತ್ತೆ

ದಿನೇ ದಿನೇ ಕರಾವಳಿಯಲ್ಲಿ ಹೆಚ್ಚಾಗುತ್ತಿದೆ ಸೋಂಕಿತರ ಸಂಖ್ಯೆ

ILI – 63 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 38 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 16 ಪಾಸಿಟಿವ್

SARI – 10 ಮಂದಿಗೆ ಕೊರೋನಾ ಪಾಸಿಟಿವ್

ವಿದೇಶದಿಂದ ಬಂದ 4 ಮಂದಿಗೆ ಕೊರೋನಾ ಸೋಂಕು ದೃಢ

ದ.ಕ ಜಿಲ್ಲೆಯಲ್ಲಿ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿದರುವ ಕೊರೋನಾ ಸೋಂಕು.

Comments are closed.