ಕರಾವಳಿ

ದ.ಕ. ಜಿಲ್ಲೆಯಲ್ಲಿ ನಾಲ್ಕು ಮಂದಿ ಕೊರೋನಕ್ಕೆ ಬಲಿ : ಸಾವಿನ ಸಂಖ್ಯೆ 50ಕ್ಕೇರಿಕೆ

Pinterest LinkedIn Tumblr

ಮಂಗಳೂರು, ಜುಲೈ.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ವ್ಯಾಪಕವಾಗಿ ಕಂಡು ಬರುತ್ತಿದ್ದು, ಸೋಂಕಿಗೆ ಬಲಿಯಾಗುವವರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ನಾಲ್ಕು ಮಂದಿ ಕೊರೊನಾಗೆ ಬಲಿಯಾಗುವ ಮೂಲಕ ಕೋವಿಡ್‌ಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲೂ ಹೆಚ್ಚಳ ಕಂಡುಬರುತ್ತಿದೆ. ರವಿವಾರ ಒಂದೇ ದಿನ ಐವರು ಕೊರೋನಕ್ಕೆ ಬಲಿಯಾಗಿದ್ದಾರೆ. ಸೋಮವಾರ ಮತ್ತೆ ನಾಲ್ಕು ಮಂದಿ ಕೊರೊನಾಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಸೋಮವಾರ ಮೃತಪಟ್ಟವರ ಪೈಕಿ ಇಬ್ಬರು ಐಸಿಯುನಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ತೀವ್ರ ಉಸಿರಾಟದ ತೊಂದರೆ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು.

ಮಧುಮೇಹ, ಹೃದಯ ಸಂಬಂಧಿ ಕಾಯಿಲೆ, ನ್ಯುಮೋನಿಯದಿಂದ ಬಳಲುತ್ತಿದ್ದ 70 ವರ್ಷದ ವೃದ್ಧ, ಯಕೃತ್ತಿನ ಉರಿಯೂತದಿಂದ ಬಳಲುತ್ತಿದ್ದ 53 ವರ್ಷದ ವ್ಯಕ್ತಿ, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 60 ವರ್ಷದ ವೃದ್ಧ, ಶ್ವಾಸಕೋಶ ಕಾಯಿಲೆಯಿಂದ ಬಳಲುತ್ತಿದ್ದ 70 ವರ್ಷದ ವೃದ್ಧ ಕೊವೀಡ್ ಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಸೋಮವಾರದ ಪ್ರಮುಖ ಅಂಶಗಳು :

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೋನಾ ಸಾವಿನ ಸಂಖ್ಯೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ನಾಲ್ವರು ಸಾವು

ಕೊರೋನಾದಿಂದ ಸಾವಿನ ಸಂಖ್ಯೆ 50ಕ್ಕೇರಿಕೆ

70,53,60,70 ವರ್ಷದ ಕೊರೋನಾ ಸೋಂಕಿತರು ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿನಿತ್ಯ ಏರುತ್ತಿರುವ ಸಾವಿನ ಸಂಖ್ಯೆ.

Comments are closed.