(ಕಡತ ಚಿತ್ರ)
ಬೆಂಗಳೂರು, ಜುಲೈ.14: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ 2019-20 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ದಕ್ಷಿಣ ಕನ್ನಡ , ಉಡುಪಿ ಜಿಲ್ಲೆ 90.71% ಫಲಿತಾಂಶದೊಂದಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇಕಡಾ 81.53 ಫಲಿತಾಂಶದೊಂದಿಗೆ ಕೊಡಗು ಜಿಲ್ಲೆ ದ್ವಿತೀಯ ಸ್ಥಾನದಲ್ಲಿ 56.08 ಶೇಕಡಾದೊಂದಿಗೆ ಚಿತ್ರದುರ್ಗ, ರಾಯಚೂರು ಶೇಕಡಾ 56.23 ಶೇಕಡಾದೊಂದಿಗೆ ಮತ್ತು ವಿಜಯಪುರ 54.22 ಶೇಕಡಾದೊಂದಿಗೆ ಕೊನೆಯ ಮೂರು ಸ್ಥಾನಗಳಲ್ಲಿವೆ. ಚಿಕ್ಕಮಗಳೂರು ಜಿಲ್ಲೆ ನಂತರದ ಸ್ಥಾನದಲ್ಲಿದೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ಹೊಸಬರು 5,56267 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3,84,947 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನಾರಾವರ್ತಿತ 91,025 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 25,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಶೇ. 76.02 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ,65.52 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ ಶೇ. 41.27 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಅಧಿಕೃತ ಘೋಷಣೆಗೂ ಮೊದಲೇ ದ್ವಿತೀಯ ಪಿಯುಸಿ ಫಲಿತಾಂಶ ಇಲಾಖೆಯ ವೆಬ್ ಸೈಟ್ ನಲ್ಲಿ http://karresults.nic.in/ http://karresults.nic.in/indexPUC_2020.asp ಫಲಿತಾಂಶ ಪ್ರಕಟವಾಗಿದೆ. ಉತ್ತೀರ್ಣ ವಿದ್ಯಾರ್ಥಿಗಳ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ತಲುಪಲಿದೆ.
ಮಾ.4ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತು. ಕೋವಿಡ್ 19 ಹಿನ್ನೆಲೆಯಲ್ಲಿ ಮಾ.23ರ ಇಂಗ್ಲಿಷ್ ಪರೀಕ್ಷೆ ಮುಂದೂಡಲಾಗಿತ್ತು. ಜೂ. 18ರಂದು ಈ ಪರೀಕ್ಷೆಯನ್ನು ಎಲ್ಲ ಸುರಕ್ಷಾ ಕ್ರಮಗಳೊಂದಿಗೆ ನಡೆಸಲಾಗಿತ್ತು. ಇಂದು ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದೆ.
ಕಳೆದ ಭಾರಿ ಮೊದಲ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡಕ್ಕೆ ಎರಡನೇ ಸ್ಥಾನ:
ಮಾ.1ರಿಂದ 18ರ ವರೆಗೆ ನಡೆಸಲಾಗಿರುವ 2019ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92.20 ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನವನ್ನು ಅಲಂಕರಿಸಿತ್ತು. ಶೇ. 90.91 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಭಾರಿ ಈ ಎರಡೂ ಜಿಲ್ಲೆಗಳು ರಾಜ್ಯದಲ್ಲೇ ಪ್ರಥಮವನ್ನು ಪಡೆದಿದೆ.
ಉಳಿದಂತೆ 2019ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 83.31 ಫಲಿತಾಂಶದೊಂದಿಗೆ ಕೊಡಗು ಜಿಲ್ಲೆ ತೃತೀಯ ಸ್ಥಾನ ಹಾಗೂ ಶೇ.51.42 ಫಲಿತಾಂಶ ಪಡೆಯುವ ಮೂಲಕ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿ ಉಳಿದಿತ್ತು.
Comments are closed.