ಕರಾವಳಿ

ನಾಳೆಯಿಂದ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ತಾತ್ಕಾಲಿಕ ಸ್ಥಗಿತ

Pinterest LinkedIn Tumblr

ಮಂಗಳೂರು, ಜುಲೈ.15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲಾಡಳಿತ ಮತ್ತೆ ಲಾಕ್‌ಡೌನ್ ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ನಿಂದ ಪತ್ರಿಕಾ ಭವನದಲ್ಲಿ ನಡೆಸುವ ಪತ್ರಿಕಾಗೋಷ್ಠಿಗಳನ್ನು ಜುಲೈ 16ರಿಂದ ಮುಂದಿನ ಆದೇಶ ತನಕ ರದ್ದುಪಡಿಸಲಾಗಿದೆ.

ಮುಂದಿನ ಪರಿಸ್ಥಿತಿ ಅವಲೋಕಿಸಿ, ತೀರ್ಮಾನ ಕೈಗೊಳ್ಳಲಾಗುವುದು. ಪತ್ರಕರ್ತರು ಮತ್ತು ಪತ್ರಿಕಾಗೋಷ್ಠಿ ನಡೆಸುವ ಸಾರ್ವಜನಿಕರ ಸಹಕಾರ ಕೋರಲಾಗಿದೆ.

ಪತ್ರಕರ್ತರು ಇತರೆಡೆ ಸುದ್ದಿ ಮಾಡುವ ಸಂದರ್ಭದಲ್ಲೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದು ಕೊಂಡು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಜನಜಂಗುಳಿ ಇರುವ ಪ್ರದೇಶಗಳಿಗೆ ತೆರಳದೆ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ತಮ್ಮನ್ನು ಕೊರೊನಾ ವೈರಸ್‌ನಿಂದ ರಕ್ಷಿಸಿಕೊಳ್ಳಲು ಸ್ವಯಂ ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ತಿಳಿಸಿದ್ದಾರೆ.

Comments are closed.