ಕರಾವಳಿ

ಮಡಿವಾಳ ಸಮಾಜ : ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ

Pinterest LinkedIn Tumblr

ಮಂಗಳೂರು : 2020-21ನೇ ಸಾಲಿನಲ್ಲಿ ಮಡಿವಾಳ ಸಮಾಜಕ್ಕೆ ಸೇರಿದ ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡನ್, ಸಾಕಲವಾಡು ಜನರ ಆರ್ಥಿಕ ಅಭಿವೃದ್ಧಿಗಾಗಿ 1.ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, 2.ಸ್ವಯಂ ಉದ್ಯೋಗ ಸಾಲ ಯೋಜನೆ, 3.ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ, 4.ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು 5.ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವ ಮೇಲ್ಕಂಡ ಸಮಾಜದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋವನ್ನು ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರು ಜಮೀನಿನ ದಾಖಲಾತಿಗಳು ಮತ್ತು ಸಣ್ಣ ರೈತರ ಪ್ರಮಾಣ ಪತ್ರಗಳನ್ನು ನಿಗಮದ ವೆಬ್‍ಸೈಟ್ www.dbcdc.karnataka.gov.in  ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಮೇಲ್ಕಂಡ ವೆಬ್‍ಸೈಟ್‍ನಲ್ಲಿ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Comments are closed.