ಕರಾವಳಿ

ದ.ಕ.ಜಿಲ್ಲೆಯಲ್ಲಿ ಶನಿವಾರ 237 ಮಂದಿಯಲ್ಲಿ ಸೋಂಕು ಪತ್ತೆ : ಸೋಂಕಿಗೆ 4 ಮಂದಿ ಬಲಿ

Pinterest LinkedIn Tumblr

ಮಂಗಳೂರು, ಜುಲೈ.18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 237 ಮಂದಿಯಲ್ಲಿ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಶನಿವಾರ ಮತ್ತೊಮ್ಮೆ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ. ಶುಕ್ರವಾರ ಜಿಲ್ಲೆಯಲ್ಲಿ ಅತ್ಯಾಧಿಕ 311 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3074 ಇತ್ತು. ಆದರೆ ಇಂದು ಒಂದೇ ದಿನ ಮತ್ತೆ 237 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಒಟ್ಟು ಸಂಖ್ಯೆ 3311ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಜಿಲ್ಲೆಯಲ್ಲಿ ಇಂದು 109 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಸದ್ಯ, ದಕ್ಷಿಣ ಕನ್ನಡದಲ್ಲಿ 1848 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು, ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮತ್ತೆ 4 ಮಂದಿ ಚಿಕಿತ್ಸೆ ಫಲಕಾರಿಯಾಗದೆ, ಸಾವನ್ನಪ್ಪಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಮಾಹಿತಿ ನೀಡಿದೆ

ಶನಿವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡಾ ಕೊರೋನಾ‌ ಮಹಾ ಸ್ಪೋಟ

ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 237 ಮಂದಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ‌ ಒಟ್ಟು 1848 ಆಕ್ವೀವ್ ಕೇಸ್

ಈವರೆಗೆ ಜಿಲ್ಲೆಯಲ್ಲಿ ಒಟ್ಟು1,387 ಮಂದಿ ಡಿಸ್ಚಾರ್ಚ್

ಇಂದು ಒಂದೇ ದಿನ ನಾಲ್ವರು ಕೊರೋನಾಗೆ ಬಲಿ

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೋನಾ ಪಾಸಿಟಿವ್ ಸಂಖ್ಯೆ

ಪ್ರತಿದಿನ ಹೆಚ್ಚಾಗುತ್ತಿರುವ ಸಾವಿನ ಸಂಖ್ಯೆ

ದ.ಕ ಜಿಲ್ಲೆಯಲ್ಲಿ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವ ಕೊರೋನಾ ಸೋಂಕು.

Comments are closed.