ಮಂಗಳೂರು, ಜುಲೈ.19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು 285 ಮಂದಿಯಲ್ಲಿ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಇಂದು ಮತ್ತೊಮ್ಮೆ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ. ಶನಿವಾರ ಜಿಲ್ಲೆಯಲ್ಲಿ 237 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3311 ಇತ್ತು. ಆದರೆ ಇಂದು ಒಂದೇ ದಿನ ಮತ್ತೆ 285 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಒಟ್ಟು ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಇಂದು 104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ.
ಇಂದು ಸೋಂಕಿಗೆ ಇಬ್ಬರು ಬಲಿ:
ದ.ಕ.ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಜುಲೈ 9ರಂದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 18ರಂದು ಅವರು ಮೃತಪಟ್ಟಿದ್ದರು. ಇದೀಗ ಅವರ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.
ಮಂಗಳೂರು ಮೂಲದ 53 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಅನಿಯಂತ್ರಿತ ಡಯಾಬಿಟಿಸ್ ನಿಂದ ಬಳಲುತ್ತಿದ್ದರು. ಜುಲೈ 15ರಂದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರವಿವಾರದಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಕೊರೊನಾ ಪರೀಕ್ಷಾ ವರದಿಯೂ ಕೂಡ ಪಾಸಿಟಿವ್ ಬಂದಿದೆ ಎಂಬುವುದಾಗಿ ಜಿಲ್ಲಾಡಳಿತ ವರದಿ ಮಾಡಿದೆ.
ರವಿವಾರದ ಪ್ರಮುಖ ಅಂಶಗಳು :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡಾ ಕೊರೋನಾ ಮಹಾ ಸ್ಪೋಟ
ಜಿಲ್ಲೆಯಲ್ಲಿ ಇಂದು ಬರೋಬ್ಬರಿ 285 ಮಂದಿಗೆ ಕೊರೋನಾ ಪಾಸಿಟಿವ್
ಜಿಲ್ಲೆಯಲ್ಲಿ ಒಟ್ಟು 2,028 ಆಕ್ವೀವ್ ಕೇಸ್
ಈವರೆಗೆ ಜಿಲ್ಲೆಯಲ್ಲಿ ಒಟ್ಟು 1,491 ಮಂದಿ ಡಿಸ್ಚಾರ್ಚ್
ಇಂದು 104 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಇಂದು ಒಂದೇ ದಿನ ಇಬ್ಬರು ಕೊರೋನಾಗೆ ಬಲಿ
77 ವರ್ಷದ ಮಹಿಳೆ ಹಾಗೂ 53 ವರ್ಷದ ಗಂಡಸು ಕೊರೋನಾಗೆ ಬಲಿ
ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೊರೋನಾ ಪಾಸಿಟಿವ್ ಸಂಖ್ಯೆ
ಪ್ರತಿದಿನವೂ ಕೊರೋನಾಕ್ಕೆ ಜನ ಬಲಿ
ದ.ಕ ಜಿಲ್ಲೆಯಲ್ಲಿ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವ ಕೊರೋನಾ ಸೋಂಕು.

Comments are closed.