ಕರಾವಳಿ

ದ.ಕ.ಜಿಲ್ಲೆಯ ಇತರೆ ತಾಲೂಕುಗಳಲ್ಲಿಯೂ ಕೋವಿಡ್ ಕೇರ್ ಸೆಂಟರ್ ತೆರೆಯಲು ಸಂಸದ ಕಟೀಲ್ ಸೂಚನೆ

Pinterest LinkedIn Tumblr

ಮಂಗಳೂರು, ಜುಲೈ.20: ಜಿಲ್ಲೆಯ ಇತರೆ ತಾಲೂಕು ಕೇಂದ್ರಗಳಲ್ಲಿಯೂ ಕೋವಿಡ್ ಸೋಂಕಿತರಿಗೆ ಕೇರ್ ಸೆಂಟರ್ ತೆರೆಯಲು ಕ್ರಮ ಕೈಗೊಳ್ಳಲು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಸೂಚಿಸಿದ್ದಾರೆ.

ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತ್ರತ್ವದಲ್ಲಿ ಸೋಮವಾರ ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಕೋರೋನಾ ರೋಗಿಗಳ ನಿರ್ವಹಣೆ ಕುರಿತು ಸಭೆಯಲ್ಲಿ ಈ ಮಾಹಿತಿ ನೀಡಿದರು.

ರೋಗಲಕ್ಷಣಗಳಿಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ರಾಜ್ಯ ಸರಕಾರ ಅವಕಾಶ ನೀಡಿರುವುದರಿಂದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಸಂಸದರು ಹೇಳಿದರು.

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ನಿರ್ದೇಶಕ ರಿಚರ್ಡ್ ಕೊಹಿಲೋ ಅವರು ಮಾತನಾಡಿ, ತಮ್ಮ ಆಸ್ಪತ್ರೆಯಲ್ಲಿ ಎಲ್ಲಾ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸರಕಾರದ ಎಲ್ಲಾ ನಿರ್ದೇಶನಗಳನ್ನು ಪೂರ್ಣವಾಗಿ ಅನುಸರಿಸಲಾಗುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರತ್ನಾಕರ್, ಆಸ್ಪತ್ರೆ ಆಡಳಿತಾಧಿಕಾರಿ ರುಡಾಲ್ಫ್ ರವಿ ಡೇಸಾ ಮತ್ತಿತರರು ಇದ್ದರು.

Comments are closed.