ಕರಾವಳಿ

ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಕ್ಕೂ ತಟ್ಟಿದ ಕೊರೋನಾ ಎಫೆಕ್ಟ್ : ಎಲ್ಲಾ ಹಬ್ಬ ಆಚರಣೆಗಳಿಗೆ ನಿರ್ಬಂಧ

Pinterest LinkedIn Tumblr

ಮಂಗಳೂರು‌‌‌‌, ಜುಲೈ. 21 : ಇಡೀ ವಿಶ್ವವ್ಯಾಪಿಯಾಗಿರುವ ಕೊರೋನಾ ಮಾಹಾಮಾರಿ ದ.ಕ. ಜಿಲ್ಲೆಯಲ್ಲಿಯೂ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳು ಸೇರಿದಂತೆ ಹಲವಾರು ಹಬ್ಬ ಆಚರಣೆಗಳಿಗೆ ಸಾರ್ವಜನಿಕವಾಗಿ ಆಚರಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈಗಾಗಲೇ ಕರಾವಳಿಯ ನಾಗರಾಧನಾ ಕ್ಷೇತ್ರಗಳಲ್ಲಿ ಜುಲೈ 25 ಶನಿವಾರದಂದು ನಡೆಯುವ ನಾಗರಪಂಚಮಿ ಆಚರಣೆ ನಿಷೇಧ ಹೇರಲಾಗಿದ್ದು, ನಾಗರಪಂಚಮಿ ಉತ್ಸವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಭಾಗವಹಿಸಲು ಅವಕಾಶವಿಲ್ಲ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇದೀಗ ಕೆಲವೇ ದಿನಗಳ ಅಂತರಗಳಲ್ಲಿ ಹಿಂದೂಗಳ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳು ಸೇರಿದಂತೆ ಯಾವೂದೇ ಹಬ್ಬಗಳ ಸಾರ್ವಜನಿಕ ಆಚರಣೆಯನ್ನು ಕೂಡಾ ನಿಷೇಧ ಮಾಡಲಾಗಿದ್ದು, ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ ಹಬ್ಬಗಳನ್ನು ಆಚರಿಸಿ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್‌‌‌ ಸಭೆಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಯಾವೂದೇ ಹಬ್ಬಗಳ ಆಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿಲ್ಲ. ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದಲ್ಲಿ ಹೆಚ್ಚಿನ ಜನರು ಒಂದೆಡೆ ಸೇರುವುದರಿಂದ ತ್ವರಿತವಾಗಿ ಸೋಂಕು ಹರಡುವ ಸಾಧ್ಯತೆ ಇದೆ. ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕೇತಿಕವಾಗಿ ಹಬ್ಬ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Comments are closed.