ಕರಾವಳಿ

ದ.ಕ.ಜಿಲ್ಲೆಯಲ್ಲಿ ಬುಧವಾರ ಮತ್ತೆ 162 ಕೊರೋನಾ ಪಾಸಿಟಿವ್ – ನಾಲ್ಕು ಸಾವಿರ ಸಮಿಪಿಸಿದ ಸೋಂಕಿತರ ಸಂಖ್ಯೆ

Pinterest LinkedIn Tumblr

ಮಂಗಳೂರು, ಜುಲೈ. 22 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 162 ಮಂದಿಗೆ ಸೋಂಕು ಧೃಢಪಟ್ಟಿದೆ. ಕಳೆದ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಸೋಮವಾರ ಒಮ್ಮೆಲೆ ಕಡಿಮೆಯಾಗಿತ್ತು. ಆದರೆ ಮಂಗಳವಾರ ಮತ್ತು ಬುಧವಾರ ಮತ್ತೆ ದಿಢೀರ್ ಹೆಚ್ಳಳವಾಗಿದೆ.

ಬುಧವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 162 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಸೋಮವಾರ ಸೋಂಕು ಪೀಡಿತರ ಸಂಖ್ಯೆ ಒಮ್ಮೆಲೆ ಇಳಿಕೆಯಾಗಿದ್ದು ಬರೀ 89 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು, ಬಳಿಕ ಮಂಗಳವಾರ ಸೋಂಕು ಪೀಡಿತರ ಸಖ್ಯೆ ಏರಿಕೆಯಾಗಿದ್ದು, 149 ಮಂದಿಯಲ್ಲಿ ಸೋಂಕು ಧೃಢಪಟ್ಟಿತ್ತು.

ನಿನ್ನೆ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3834ಇತ್ತು. ಆದರೆ ಬುಧವಾರ ಸೋಂಕು ಪೀಡಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, 162 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಸಂಖ್ಯೆ ನಾಲ್ಕು ಸಾವಿರದ ಗಡಿ ಸಮಿಪಿಸಿದ್ದು, ಒಟ್ಟು ಸಂಖ್ಯೆ 3996ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಎರಡುಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ.

ಬುಧವಾರದಂದು ಜಿಲ್ಲೆಯಲ್ಲಿ ಮತ್ತೆ 69 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟು 1744 ಮಂದಿ ಕೊರೊನಾದಿಂದ ಗುಣಮುಖರಾದಂತಾಗಿದೆ. ಸದ್ಯ 2160 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಪ್ರಾಥಮಿಕ ಸಂಪರ್ಕದಿಂದ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 70 ಐ ಎಲ್ ಐ, 18 ಸಾರಿ ಪ್ರಕರಣಗಳಾಗಿದೆ. ಅಂತರಾಜ್ಯ ಪ್ರಯಾಣದಿಂದ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು 60 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಬುಧವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 162 ಮಂದಿಗೆ ಕೊರೋನಾ ಪಾಸಿಟಿವ್

ILI ಪ್ರಕರಣದಿಂದ 70 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 60 ಮಂದಿಗೆ ಕೊರೋನಾ ಪಾಸಿಟಿವ್

SARI ಪ್ರಕರಣದಿಂದ 18 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 13 ಮಂದಿಗೆ ಕೊರೋನಾ ಪಾಸಿಟಿವ್

ವಿದೇಶದಿಂದ ಬಂದ ಒಬ್ಬರಿಗೆ ಕೊರೋನಾ ಸೋಂಕು ದೃಢ

ಇಂದು ಒಂದೇ ದಿನ‌ ಬರೋಬ್ಬರಿ‌ 5 ಮಂದಿ ಕೊರೋನಾಗೆ ಬಲಿ

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪಾಸಿಟಿವ್.

Comments are closed.