ಕರಾವಳಿ

ದ.ಕ.ಜಿಲ್ಲೆಯಲ್ಲಿ ಗುರುವಾರ ಮತ್ತೆ 218 ಕೊರೋನಾ ಪಾಸಿಟಿವ್ – ನಾಲ್ಕು ಸಾವಿರ ದಾಟಿದ ಸೋಂಕಿತರ ಸಂಖ್ಯೆ

Pinterest LinkedIn Tumblr

ಮಂಗಳೂರು, ಜುಲೈ. 23 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 218 ಮಂದಿಗೆ ಸೋಂಕು ಧೃಢಪಟ್ಟಿದೆ. ಕಳೆದ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಸೋಮವಾರ ಒಮ್ಮೆಲೆ ಕಡಿಮೆಯಾಗಿತ್ತು. ಆದರೆ ಮಂಗಳವಾರದಿಂದ ಮತ್ತೆ ದಿಢೀರ್ ಹೆಚ್ಳಳವಾಗಿದೆ

ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಸೋಮವಾರ ಸೋಂಕು ಪೀಡಿತರ ಸಂಖ್ಯೆ ಒಮ್ಮೆಲೆ ಇಳಿಕೆಯಾಗಿದ್ದು ಬರೀ 89 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು, ಬಳಿಕ ಮಂಗಳವಾರದಿಂದ ಸೋಂಕು ಪೀಡಿತರ ಸಖ್ಯೆ ಏರಿಕೆಯಾಗಿದ್ದು, ನಿನ್ನೆ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ3996ಇತ್ತು. ಆದರೆ ಗುರುವಾರ ಸೋಂಕು ಪೀಡಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, 218 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಸಂಖ್ಯೆ ನಾಲ್ಕು ಸಾವಿರದ ಗಡಿ ದಾಟಿದ್ದು, ಒಟ್ಟು ಸಂಖ್ಯೆ 4214ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಎರಡುಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಬುಧವಾರದಂದು ಜಿಲ್ಲೆಯಲ್ಲಿ ಮತ್ತೆ 69 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಒಟ್ಟು 1744 ಮಂದಿ ಕೊರೊನಾದಿಂದ ಗುಣಮುಖರಾದಂತಾಗಿದೆ.

ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 118 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 2253 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಗುರುವಾರದಂದು ಜಿಲ್ಲೆಯಲ್ಲಿ 7 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 218 ಮಂದಿಗೆ ಕೊರೋನಾ ಪಾಸಿಟಿವ್

ILI ಪ್ರಕರಣದಿಂದ 110 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 57 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 36 ಮಂದಿಗೆ ಕೊರೋನಾ ಪಾಸಿಟಿವ್

SARI ಪ್ರಕರಣದಿಂದ 15 ಮಂದಿಗೆ ಕೊರೋನಾ ಪಾಸಿಟಿವ್

ಇಂದು ಒಂದೇ ದಿನ‌ ಬರೋಬ್ಬರಿ‌ 7 ಮಂದಿ ಕೊರೋನಾಗೆ ಬಲಿ

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪಾಸಿಟಿವ್.

Comments are closed.