ಕರಾವಳಿ

ದ.ಕ.ಜಿಲ್ಲೆಯಲ್ಲಿ ಶನಿವಾರ 218 ಮಂದಿಯಲ್ಲಿ ಸೋಂಕು ಪತ್ತೆ : ಸೋಕಿತರ ಸಂಖ್ಯೆ 4612ಕ್ಕೆ ಏರಿಕೆ

Pinterest LinkedIn Tumblr

ಮಂಗಳೂರು, ಜುಲೈ. 26 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 218 ಮಂದಿಗೆ ಸೋಂಕು ಧೃಢಪಟ್ಟಿದೆ. ಕಳೆದ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮತ್ತೆ ದಿಢೀರ್ ಸೋಂಕು ಪೀಡಿತರ ಸಖ್ಯೆ ಏರಿಕೆಯಾಗಿದ್ದು, ಶುಕ್ರವಾರ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4394 ಇತ್ತು. ಆದರೆ ಶನಿವಾರ 218 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಒಟ್ಟು ಸಂಖ್ಯೆ 4612ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಇದೇ ಮೊದಲ ಬಾರಿಗೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ 70 ತಲುಪಿದ್ದು, ಶನಿವಾರ ಗರಿಷ್ಠ ಪ್ರಮಾಣಕ್ಕೇರಿದೆ. ಇದುವರೆಗೆ ಈ ಸಂಖ್ಯೆ 30-50ರ ಆಸುಪಾಸಿನಲ್ಲಿತ್ತು. ಇದೀಗ ದಿಢೀರ್ ಏರಿಕೆಯಾಗಿದೆ.

ಉಳಿದಂತೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 46 ಮಂದಿಗೆ, 87 ಐಎಲ್‌ಐ ಪ್ರಕರಣ, 15 ಎಸ್‌ಎಆರ್‌ಐ ಪ್ರಕರಣ ಹಾಗೂ ಮೂಲವೇ ಪತ್ತೆಯಾಗದ 70 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಗಳು, ಆರೈಕೆ ಕೇಂದ್ರ, ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 140 ಮಂದಿ ಇಂದು ಸೋಂಕಿನಿಂದ ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2,127ಕ್ಕೇರಿದೆ. ಪ್ರಸ್ತುತ 2370 ಮಂದಿ ನಗರದ ಕೋವಿಡ್‌ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಂದು ಮತ್ತೆ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಶನಿವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಕೂಡಾ ಕೊರೋನಾ ಮಹಾ ಸ್ಫೋಟ

ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 218 ಮಂದಿಗೆ ಕೊರೋನಾ ಪಾಸಿಟಿವ್

ಶನಿವಾರ ಒಂದೇ ದಿನ 8 ಮಂದಿ ಕೊರೋನಾ ಮಹಾಮಾರಿಗೆ ಬಲಿ

ILI ಪ್ರಕರಣದಿಂದ 87 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 70 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 46 ಮಂದಿಗೆ ಕೊರೋನಾ ಪಾಸಿಟಿವ್

SARI ಪ್ರಕರಣದಿಂದ 15 ಮಂದಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪಾಸಿಟಿವ್

Comments are closed.