ಕರಾವಳಿ

ವಿದೇಶಗಳಿಂದ ಬಂದವರಿಗೆ ಕ್ವಾರೆಂಟೈನ್ ಕಡ್ಡಾಯ : ಇಲ್ಲಿದೆ ಸಮಗ್ರ ವಿವರ

Pinterest LinkedIn Tumblr

ಮಂಗಳೂರು, ಜುಲೈ.26 : ವಿದೇಶಗಳಿಂದ ಬಂದವರ ಕ್ವಾರೆಂಟೈನ್ ಅವಧಿ ಬಗ್ಗೆ ಅವಾಸ್ತವಿಕ ಮಾಹಿತಿಗಳು ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಕಟಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ಬಂದವರ ಕ್ವಾರೆಂಟೈನ್ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ವಿದೇಶಗಳಿಂದ ಬಂದವರು ಕಡ್ಡಾಯವಾಗಿ 14 ದಿನ ಕ್ವಾರೆಂಟೈನ್ ಇರಬೇಕಾಗುತ್ತದೆ. ಇದರಲ್ಲಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರೆಂಟೈನ್ ನಲ್ಲಿ ( ಲಾಡ್ಜ್ ) ಇರಲೇಬೇಕು. ಈ ಅವಧಿಯಲ್ಲಿ ಅವರ ಗಂಟಲದ್ರವ ಪರೀಕ್ಷೆ ನಡೆಸಿ, ನೆಗೆಟಿವ್ ಬಂದರೆ 7ನೇ ದಿನದ ನಂತರ ಹೋಂ ಕ್ವಾರೆಂಟೈನ್ ಗೆ ಕಳುಹಿಸಲಾಗುತ್ತದೆ.

ಆದರೆ, ವಿದೇಶದಿಂದ ಬಂದವರಲ್ಲಿ 10 ವರ್ಷದೊಳಗಿನ ಮಕ್ಕಳು, 60 ವರ್ಷದ ಮೇಲಿನವರು, ಗರ್ಭಿಣಿಯರು, ಬೇರೆ ಖಾಯಿಲೆಗಳಿಂದ ಬಳಲುತ್ತಿರುವವರನ್ನು ಸಾಂಸ್ಥಿಕ ಕ್ವಾರೆಂಟೈನ್ (ಲಾಡ್ಜ್) ಗೆ ಕಳುಹಿಸಿದ ಮರುದಿನವೇ ಅವರ ಗಂಟಲ ದ್ರವ ಮಾದರಿ ಸಂಗ್ರಹಿಸಲಾಗುತ್ತದೆ. ನಂತರ ಲ್ಯಾಬ್ ವರದಿ ನೆಗೆಟಿವ್ ಬಂದರೆ ಮಾತ್ರ ಅವರನ್ನು 14 ದಿನಗಳ ಹೋಂ ಕ್ವಾರೆಂಟೈನ್ ಗೆ ಕಳುಹಿಸಲಾಗುತ್ತದೆ* ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Comments are closed.